ಮಂಗಳೂರು: ಡಾ.ಶಂಸುಲ್ ಇಸ್ಲಾಂ ಉಪನ್ಯಾಸಕ್ಕೆ ವಿರೋಧ-ಎಬಿವಿಪಿ ಕಾರ್ಯಕರ್ತರ ಬಂಧನ
ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಬಿ.ವಿ ಕಕ್ಕಿಲ್ಲಾಯ ಪ್ರತಿಷ್ಠಾನ ಆಯೋಜಿಸಿರುವ ದೆಹಲಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಶಂಸುಲ್ ಇಸ್ಲಾಂ ಅವರ ಉಪನ್ಯಾಸ ಕಾರ್ಯಕ್ರಮವನ್ನು ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಕಾಲೇಜು ವಿದ್ಯಾರ್ಥಿಗಳ ಹೊರತಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಕಾರ್ಯಕ್ರಮದ ವಿರುದ್ಧ ಘೋಷಣೆ ಕೂಗಿದ 10ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.