Mangaluru : ಫುಟ್‍ಪಾತ್‍ನಲ್ಲಿ ಹೋಗುತ್ತಿದ್ದ ಹುಡುಗಿಯರ ಮೇಲೇರಿದ ಕಾರು

ಫುಟ್ ಪಾತ್‍ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಐದು ಮಂದಿಗೆ ಕಾರು ಢಿಕ್ಕಿಯಾಗಿ ಓರ್ವ ಯುವತಿ ದಾರುಣವಾಗಿ ಮೃತಪಟ್ಟ ಭೀಕರ ಘಟನೆ ಮಂಗಳೂರಿನ ಲೇಡಿಹಿಲ್ ಬಳಿ ನಡೆದಿದೆ.

ಅಪಘಾತದಲ್ಲಿ ರೂಪಶ್ರೀ (23) ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸುರತ್ಕಲ್‍ನ ಕಾನ, ಬಾಳದ ಗಂಗಾಧರ್ ಅವರ ಪುತ್ರಿಯಾದ ರೂಪಶ್ರೀ ಕುದ್ರೋಳಿ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದರೆಂದು ತಿಳಿದುಬಂದಿದೆ.

ರೂಪಶ್ರೀ ಜೊತೆಯಲ್ಲಿ ಸ್ವಾತಿ (26), ಹಿತ್ನವಿ (16), ಕೃತಿಕಾ(16) ಮತ್ತು ಯತಿಕಾ(12) ರಸ್ತೆಗೆ ಅಪ್ಪಳಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

5 ಮಂದಿ ಯುವತಿಯರು ಮಂಗಳೂರು ಕಾಪೆರ್Çೀರೇಷನ್ ಈಜುಕೊಳದ ಬಳಿ ಲೇಡಿಹಿಲ್ ನಿಂದ ಮಣ್ಣಗುಡ್ಡ ಜಂಕ್ಷನ್ ಕಡೆಗೆ ಫುಟ್‍ಪಾತ್‍ನಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಅದೇ ವೇಳೆ ಮಣ್ಣಗುಡ್ಡ ಜಂಕ್ಷನ್‍ನಿಂದ ಲೇಡಿಹಿಲ್ ಕಡೆಗೆ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಅತೀ ವೇಗದಲ್ಲಿ ಬಂದ ಕಾರು ಫುಟ್‍ಪಾತ್‍ನಲ್ಲಿ ಸಂಚರಿಸಿ ಐವರಿಗೂ ಢಿಕ್ಕಿಯಾಗಿದೆ.

ಕಾರು ಚಾಲಕ ಕಮಲೇಶ್ ಬಲದೇವ್ ಎಂಬಾತ ಘಟನೆ ಬಳಿಕ ಸ್ಥಳದಿಂದ ಪರಾರಿಯಾಗಿದ್ದ, ಬಳಿಕ ಶೋರೂಮ್ ಮುಂದೆ ಅಪಘಾತಕ್ಕೆ ಕಾರಣವಾದ ಕಾರನ್ನು ನಿಲ್ಲಿಸಿ ಮನೆಗೆ ಹೋಗಿ ಟ್ರಾಫಿಕ್ ವೆಸ್ಟ್ ಪೆÇಲೀಸರಿಗೆ ಶರಣಾಗಿದ್ದಾನೆ. ಫುಟ್‍ಪಾತ್ ಮೇಲೆ ಕಾರು ಹತ್ತಿಸಿ ಅಪಘಾತಕ್ಕೆ ಕಾರಣವಾಗಿದ್ದಾನೆ. ಬೆಚ್ಚಿ ಬೀಳಿಸುವ ದೃಶ್ಯಗಳು ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿವೆ.

Related Posts

Leave a Reply

Your email address will not be published.