ನರೇಂದ್ರ ಮೋದಿ ಸರಕಾರವನ್ನು ಕಿತ್ತೊಗೆಯಲು ಕಾರ್ಮಿಕ ವರ್ಗದ ದೃಢ ನಿರ್ಧಾರ – ಜೆ. ಬಾಲಕೃಷ್ಣ ಶೆಟ್ಟಿ

ಒಳ್ಳೆಯ ದಿನಗಳು ಬರಲಿದೆ ಎಂದು ದೇಶದ ಜನತೆಗೆ ಮಂಕುಬೂದಿ ಎರಚಿ ಅಧಿಕಾರಕ್ಕೇರಿದ ನರೇಂದ್ರ ಮೋದಿ ಸರಕಾರ ಕಳೆದ 9 ವರ್ಷಗಳಲ್ಲಿ ನಿರಂತರವಾಗಿ ಕಾರ್ಪೊರೇಟ್ ಕಂಪೆನಿಗಳ ಹಿತ ಕಾಯುವ ಮೂಲಕ ಜನಸಾಮಾನ್ಯರ ಬದುಕನ್ನು ಸರ್ವನಾಶಗೊಳಿಸಿದೆ.

ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಯವರ ಕೈಗೊಪ್ಪಿಸಿ ದೇಶದ ಆರ್ಥಿಕತೆಯನ್ನು ದಿವಾಳಿ ಮಾಡಿದೆ.ಇಂತಹ ಜನದ್ರೋಹಿ ಸರಕಾರ ಮತ್ತೆ ಅಧಿಕಾರಕ್ಕೇರಿದರೆ ದೇಶದ ಸ್ವಾತಂತ್ರ್ಯ ಸಮಗ್ರತೆ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯ ಕಟ್ಟಿಟ್ಟ ಬುತ್ತಿ. ಆದ್ದರಿಂದ ಇಂತಹ ಸರಕಾರವನ್ನು ಕಿತ್ತೊಗೆಯಲು ದೇಶದ ಕಾರ್ಮಿಕ ವರ್ಗ ಧ್ರಢ ನಿರ್ಧಾರ ಕೈಗೊಳ್ಳಲಿದ್ದು, ಮುಂಬರುವ ದಿನಗಳಲ್ಲಿ ಸಮರಶೀಲ ಹೋರಾಟಗಳು ದೇಶಾದ್ಯಂತ ನಡೆಯಲಿದೆ ಎಂದು CITU ದ.ಕ.ಜಿಲ್ಲಾಧ್ಯಕ್ಷರಾದ ಜೆ.ಬಾಲಕ್ರಷ್ಣ ಶೆಟ್ಟಿಯವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಇಂದು ಮತ್ತು ನಾಳೆ ಮಂಗಳೂರಿನ ಬೋಳಾರ ಕಚೇರಿ ಸಭಾಂಗಣದಲ್ಲಿ CITU ನೇತ್ರತ್ವದಲ್ಲಿ ನಡೆಯುತ್ತಿರುವ ಜಿಲ್ಲಾ ಮಟ್ಟದ ಸಂಘಟನಾ ಕಾರ್ಯಾಗಾರವನ್ನು ಉದ್ಘಾಟಿಸುತ್ತಾ ಈ ಮಾತುಗಳನ್ನು ಹೇಳಿದರು.

ಪ್ರಾಸ್ತಾವಿಕ ವಾಗಿ ಮಾತನಾಡಿದCITU ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ದುಡಿಯುವ ವರ್ಗದ ಚಳುವಳಿ ಹಾಗೂ ಸಂಘಟನಾ ವಿಸ್ತರಣೆಗಾಗಿ ಹಮ್ಮಿಕೊಂಡ ಈ ಸಂಘಟನಾ ಕಾರ್ಯಗಾರವು ಮುಂಬರುವ ದಿನಗಳಲ್ಲಿ ದ.ಕ.ಜಿಲ್ಲೆಯಲ್ಲಿ ಬಲಿಷ್ಠವಾದ ಕಾರ್ಮಿಕ ಚಳುವಳಿಯನ್ನು ಕಟ್ಟಲು ನಾಂದಿ ಹಾಡಲಿ ಎಂದು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ CITU ರಾಜ್ಯ ಉಪಾಧ್ಯಕ್ಷರಾದ ವಸಂತ ಆಚಾರಿಯವರು ಮಾತನಾಡುತ್ತಾ, ಕಾರ್ಪೊರೇಟ್ ಹಾಗೂ ಕೋಮುವಾದದ ಸಮ್ಮಿಶ್ರ ಕೂಟವು ದೇಶದ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ದೇಶವನ್ನು ಅಧೋಗತಿಯತ್ತ ಕೊಂಡೊಯ್ಯುತ್ತಿದೆ. ದ್ವೇಷ ರಾಜಕಾರಣದ ಮೂಲಕ ಜಾತ್ಯಾತೀತ ತತ್ವ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕೊಡಲಿ ಪೆಟ್ಟು ನೀಡುತ್ತಿದೆ ಎಂದು ಹೇಳಿದರು.

ವೇದಿಕೆಯಲ್ಲಿ CITUರಾಜ್ಯ ನಾಯಕ ರಾದ ಸೈಯದ್ ಮುಜೀಬ್, ಮಾಲಿನಿ ಮೇಸ್ತ, ರಾಧಾ ಮೂಡಬಿದ್ರೆಯವರು ಉಪಸ್ಥಿತರಿದ್ದರು

Related Posts

Leave a Reply

Your email address will not be published.