HomeFresh NewsMangaluru : ರಾಹುಲ್ ಗಾಂಧಿ ವಿರುದ್ಧ ದ್ವೇಷ ರಾಜಕಾರಣ ಆರೋಪ - ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Mangaluru : ರಾಹುಲ್ ಗಾಂಧಿ ವಿರುದ್ಧ ದ್ವೇಷ ರಾಜಕಾರಣ ಆರೋಪ – ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ನಗರದಲ್ಲಿ ಮೌನ ಪ್ರತಿಭಟನೆ ನಡೆಯುತ್ತಿದೆ. ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಮಂಗಳೂರು ನಗರ ಸಮಿತಿಯ ನೇತೃತ್ವದಲ್ಲಿ ನಗರದ ಪುರಭವನದ ಎದುರಿನ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಮಾಜಿ ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ನಡೆಯುತ್ತಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಹಾರಾರ್ಪಣೆ ಮಾಡುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಲಾಯಿತು. ಉತ್ತರ ಪ್ರದೇಶದ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ, ಮಾಜಿ ಸಚಿವ ನಕುಲ್ ದುಬೆ ಸಹಿತ ಹಲವಾರು ಸ್ಥಳೀಯ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments