ಮಂಗಳೂರು: ಜಿಲ್ಲೆಯಲ್ಲಿ ಮರಳಿನ ಸಮಸ್ಯೆಗೆ ಬಿಜೆಪಿಯ ಮರಳು ನೀತಿಯೇ ಕಾರಣ: ಹರೀಶ್ ಕುಮಾರ್

ದ.ಕ. ಜಿಲ್ಲೆಯಲ್ಲಿ ಮರಳಿನ ಸಮಸ್ಯೆಗೆ ನಾಲ್ಕು ವರ್ಷ ಆಡಳಿತ ನಡೆಸಿದ ಬಿಜೆಪಿಯ ಮರಳು ನೀತಿಯೇ ಕಾರಣ ಹೊರತು ಕಾಂಗ್ರೆಸ್ ಸರಕಾರವಲ್ಲ. ಫೋನ್ ಮಾಡಿದರೆ ಸಾಕು, 2 ಸಾವಿರಕ್ಕೆ ಒಂದು ಲೋಡ್ ಮರಳು ಮನೆ ಬಾಗಿಲಿಗೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮಾಡಿದ್ದ ಘೋಷಣೆ ಅನುಷ್ಠಾನ ಆಗಿದೆಯೇ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಪ್ರಶ್ನಿಸಿದ್ದಾರೆ.

ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರು ಕಾಂಗ್ರೆಸ್ ಸರಕಾರದ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಪ್ರತಿಕ್ರಿಯಿಸಿದರು. ಯು.ಟಿ. ಖಾದರ್ ಸಚಿವರಾಗಿದ್ದಾಗ ಸ್ಯಾಂಡ್ ಬಜಾರ್ ಆಪ್ ಮಾಡಿ ಕಡಿಮೆ ಬೆಲೆಗೆ ಕ್ಲಪ್ತ ಸಮಯದಲ್ಲಿ ಮರಳು ಸಿಗು ವಂತೆ ಮಾಡಿದ್ದರು. ಅದನ್ನು ನಿಲ್ಲಿಸಿದವರು ಯಾರು? ಡ್ರೆಜ್ಜಿಂಗ್ ಮೂಲಕ ಸೇತುವೆ ಅಡಿ ನಿರ್ಬಂಧಿತ ಪ್ರದೇಶದಲ್ಲಿ ಮರಳುಗಾರಿಕೆ ನಡೆದಿದ್ದು ತಮ್ಮ ನಾಲ್ಕು ವರ್ಷಗಳ ಆಡಳಿತ ಅವಧಿಯಲ್ಲೇ ಎಂಬುದನ್ನು ಶಾಸಕ ವೇದವ್ಯಾಸ ಕಾಮತ್ ನೆನಪಿಸಿಕೊಳ್ಳಬೇಕು ಎಂದವರು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಪದ್ಮನಾಭ ನರಿಂಗಾನ, ಟಿ.ಕೆ. ಸುಧೀರ್, ಗಣೇಶ್ ಪಜಾರಿ, ಅಬ್ದುಲ್ ಸಲೀಂ, ಶುಭೋದಯ ಆಳ್ವ, ಪ್ರಕಾಶ್ ಸಾಲ್ಯಾನ್, ಲಾರೆನ್ಸ್ ಡಿಸೋಜಾ, ಸುಭಾಶ್ ಶೆಟ್ಟಿ, ನೀರಜ್ ಪಾಲ್, ಯೋಗೇಶ್ ಕುಮಾರ್ ಮೊದಲಾವದರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.