Homekaravaliಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ತಂದು ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನ ; ಮೂವರ ಬಂಧನ

ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ತಂದು ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನ ; ಮೂವರ ಬಂಧನ

ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಖರೀದಿಸಿ ತಂದು ಅದನ್ನು ಮಂಗಳೂರಿನ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಳ್ಳಾಲ ತಾಲೂಕಿನ ತಲಪಾಡಿ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೆÇಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ 118 ಗ್ರಾಮ್ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಫೆ.12 ರಂದು ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಕಾರನ್ನು ಪತ್ತೆಹಚ್ಚಿ ಕಾರ್ಯಾಚರಣೆ ನಡೆಸಿದ್ದಾರೆ.

ಮುಕ್ಕಚೇರಿಯ ಮೊಹಮ್ಮದ್ ಶಿಫಾನ್ (28),ಉಳ್ಳಾಲ ಬಸ್ತಿ ಪಡ್ಪು ನಿವಾಸಿ ಮುಸ್ತಫಾ ಸೀದಿಯಬ್ಬ(34), ಉಳ್ಳಾಲ ಕೋಡಿ ನಿವಾಸಿ ಮೈಯದ್ದಿ (28), ಬಂಧಿತ ಆರೋಪಿಗಳು. ಆರೋಪಿಗಳಿಂದ ರೂ.11,90,000 ಮೌಲ್ಯದ 118.13 ಗ್ರಾಂ ತೂಕದ ನಿಷೇದಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೆÇೀನ್-4, ಏಂ-19-ಒಕಿ-3420 ನಂಬ್ರದ ಬೂದು ಬಣ್ಣದ ಸ್ವಿಪ್ಟ್ ಕಾರು ಸಹಿತ ಒಟ್ಟು ರೂ. 17,95,000/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಮುಸ್ತಫಾ ಸೀದಿಯಬ್ಬ ಎಂಬಾತನ ಮೇಲೆ ಈ ಹಿಂದೆ ಕಂಕನಾಡಿ ನಗರ ಪೆÇಲೀಸ್ ಠಾಣೆಯಲ್ಲಿ ದನ ಕಳ್ಳತನ ಪ್ರಕರಣ ಮತ್ತು ಮೈಯದ್ದಿ ಎಂಬಾತನ ಮೇಲೆ ಉಳ್ಳಾಲ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ. ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments