ಡ್ರಗ್ಸ್ ಪೆಡ್ಲರ್‍ಗಳನ್ನು ಗೂಂಡಾಕಾಯ್ದೆಯಡಿ ಬಂಧಿಸಿ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ

ಮಂಗಳೂರಿನಲ್ಲಿ ಮಾದಕ ವಸ್ತು ಹಾವಳಿ ವಿಪರೀತ ಹೆಚ್ಚಾಗುತ್ತಿದ್ದು, ಈ ಬಗ್ಗೆ ಡ್ರಗ್ಸ್ ಪೆಡ್ಲರ್‍ಗಳನ್ನು ಗೂಂಡಾಕಾಯ್ದೆ ಅಡಿಯಲ್ಲಿ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೆÇಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ.

ದ.ಕ. ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭ ನಗರದಲ್ಲಿ ನಡೆಯುತ್ತಿರುವ ಅಭಿಯಾನದ ಬಗ್ಗೆ ಪೆÇಲೀಸ್ ಆಯುಕ್ತ ಕುಲದೀಪ್ ಆರ್. ಜೈನ್ ಮಾಹಿತಿ ನೀಡಿದರು. ಈ ಸಂದರ್ಭ ಮುಖ್ಯಮಂತ್ರಿಯವರು ಮಾತನಾಡಿ, ಡ್ರಗ್ಸ್ ಸಮಾಜದ ಯುವಕರನ್ನು ಹಾದಿ ತಪ್ಪಿಸುತ್ತಿದೆ. ಇದಕ್ಕೆ ಕಟ್ಟುನಿಟ್ಟಿನ ಕ್ರಮವನ್ನು ಇಲಾಖೆ ವಹಿಸಬೇಕು ಎಂದರು.

ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು 1.5 ಲಕ್ಷ ಕಿಲೋ ಲೀಟರ್‍ನಿಂದ 2 ಲಕ್ಷ ಕಿಲೋ ಲೀಟರ್ ಗಳಿಗೆ ಹೆಚ್ಚಿಸಲಾಗಿದೆ. ಈ ಮೂಲಕ ಮೀನುಗಾರರಿಗೆ ಸರಕಾರದಿಂದ 250 ಕೋಟಿ ರೂ.ಗಳಷ್ಟು ನೆರವು ನೀಡಿದ್ದೇವೆ. ಇದು ಮೀನುಗಾರ ಸಮುದಾಯಕ್ಕೆ ತಲುಪುತ್ತದೆಯೇ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ಮೀನುಗಾರಿಕಾ ಉಪ ನಿರ್ದೇಶಕ ಹರೀಶ್ ಕುಮಾರ್, ಇದರಿಂದ ಸಮುದಾಯಕ್ಕೆ ದೊಡ್ಡ ಅನುಕೂಲವಾಗಿದೆ ಎಂದು ಉತ್ತರಿಸಿದರು.

ಶಕ್ತಿ ಯೋಜನೆಯಿಂದ ಜಿಲ್ಲೆಯಲ್ಲಿ ಖಾಸಗಿ ಬಸ್‍ಗಳು, ಆಟೋ ರಿಕ್ಷಾ, ಹಾಗೂ ಇತರ ಸಾರ್ವಜನಿಕ ಸಾರಿಗೆ ವಾಹನಗಳಿಗೆ ತೊಂದರೆಯಾಗಿದೆಯೇ ಎಂದು ಪ್ರಶ್ನಿಸಿದಾಗ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಶಾಸಕರಾದ ವೇದವ್ಯಾಸ ಕಾಮತ್ ಹಾಗೂ ರಾಜೇಶ್ ನಾಯ್ಕ್ ಅವರು ಖಾಸಗಿಯವರಿಗೆ ತೊಂದರೆಯಾಗಿದೆ. ಜೊತೆಗೆ ಶಾಲಾ ಮಕ್ಕಳಿಗೆ ಕೆಲವಡೆ ಬಸ್ಸುಗಳನ್ನು ನಿಲ್ಲಿಸಲಾಗುತ್ತಿಲ್ಲ ಎಂದರು.

ಸರಕಾರದ ಐದೂ ಗ್ಯಾರಂಟಿ ಯೋಜನೆಗಳ ಲಾಭ ಜಿಲ್ಲೆಯ ಪ್ರತಿಯೊಬ್ಬ ಫಲಾನುಭವಿಗೂ ದೊರಕುವಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು. ಶಿಕ್ಷಣ, ಆರೋಗ್ಯ ಸೂಚ್ಯಂಕದಲ್ಲಿ ಕುಸಿತ ಒಳ್ಳೆಯ ಬೆಳವಣಿಗೆಯಲ್ಲ

ಸುಶಿಕ್ಷಿತರ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಆರೋಗ್ಯ ಹಾಗೂ ಶಿಕ್ಷಣ ಸೂಚ್ಯಂಕದಲ್ಲಿ ಕುಸಿತ ಕಂಡುಬಂದಿದ್ದು, ಇದು ಒಳ್ಳೆ ಬೆಳವಣಿಗೆ ಅಲ್ಲ. ಶಿಕ್ಷಣದಲ್ಲಿ 2015ರಲ್ಲಿ 3ನೆ ಸ್ಥಾನದಲ್ಲಿದ್ದ ಜಿಲ್ಲೆ 2022ರಲ್ಲಿ 35ನೆ ಸ್ಥಾನ, 2023ರಲ್ಲಿ 17ನೆ ಸ್ಥಾನಕ್ಕೆ ಕುಸಿದಿರುವ ಬಗ್ಗೆ ಡಿಡಿಪಿಐ ಅವರಿಂದ ವಿವರಣೆ ಕೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ , ಉಡುಪಿ, ಮಂಗಳೂರು ಯಾವಾಗಲೂ ಪ್ರಥಮ, ದ್ವಿತೀಯ ಸ್ಥಾನದಲ್ಲಿ ಇರುತ್ತಿತ್ತು. ಈಗೇಕೆ ಹೀಗೆ ಎಂದು ಪ್ರಶ್ನಿಸಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮೇಯರ್ ಜಯಾನಂದ ಅಂಚನ್, ದ.ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ. ಅತೀಕ್, ಮುಖ್ಯಮಂತ್ರಿಗಳ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಶಾಸಕರಾದ ಹರೀಶ್ ಪೂಂಜ, ಭಾಗೀರಥಿ ಮುರಳ್ಯ, ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ವೇದವ್ಯಾಸ ಕಾಮತ್, ಅಶೋಕ್ ರೈ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಹರೀಶ್ ಕುಮಾರ್, ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಪೆÇಲೀಸ್ ಆಯುಕ್ತ ಕುಲದೀಪ್ ಆರ್.ಜೈನ್ ಉಪಸ್ಥಿತರಿದ್ದರು.

Related Posts

Leave a Reply

Your email address will not be published.