HomeFresh Newsಮಂಗಳೂರು: ವೃದ್ಧೆಯ ಕೊಲೆ ಪ್ರಕರಣ : ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಮಂಗಳೂರು: ವೃದ್ಧೆಯ ಕೊಲೆ ಪ್ರಕರಣ : ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಮಂಗಳೂರು: ಬಂಟ್ವಾಳ ಅಮ್ಮುಂಜೆ ನಿವಾಸಿಯಾದ ವೃದ್ಧೆ ಬೆನೆಡಿಕ್ಟ್ ಕಾರ್ಲೋ (73) ಎಂಬವರ ಆರೈಕೆ ನೋಡಿಕೊಳ್ಳುತ್ತಿದ್ದ ಆರೋಪಿತೆ ಬಂಟ್ವಾಳ ಅಮ್ಟಾಡಿ ನಿವಾಸಿ ಕು. ಏಲ್ಮಾ ಪ್ರೆಶ್ಚಿತ್ ಬರೆಟ್ರೋ (23) ಎಂಬಾಕೆಯು, ವೃದ್ಧೆಯ ಬಳಿಯಿದ್ದ ಚಿನ್ನಾಭರಣಗಳನ್ನು ಸುಲಿಗೆ ಮಾಡುವ ಉದ್ದೇಶದಿಂದ, ತನ್ನ ಸ್ನೇಹಿತ ಬಂಟ್ವಾಳ ನರಿಕೊಂಬು ನಿವಾಸಿ ಸತೀಶ್ ನಾಯಕ್ (28) ಎಂಬಾತನ ಸಹಾಯದಿಂದ ವೃದ್ಧೆ ಸೇವಿಸುವ ಆಹಾರದಲ್ಲಿ ವಿಷ ಬೆರೆಸಿ ಕೊಲ್ಲಲು ಯತ್ನಿಸಿ, ಅದರಲ್ಲಿ ಸಫಲರಾಗದಿದ್ದಾಗ ಮತ್ತೊಬ್ಬ ಆರೋಪಿ ಬಂಟ್ವಾಳ ನರಿಕೊಂಬು ನಿವಾಸಿ ಚರಣ್ ಕುಮಾರ್ (31) ಎಂಬಾತನ ಸಹಾಯದಿಂದ ದಿನಾಂಕ: 25-01-2021 ರಂದು ರಾತ್ರಿ, ಬೆನೆಡಿಕ್ಟ್ ಕಾರ್ಲೋರವರನ್ನು ಉಸಿರುಗಟ್ಟಿಸಿ ಕೊಲೆಗೈದು ಒಟ್ಟು 61.070 ಗ್ರಾಂ ತೂಕದ (ಅಂದಿನ ರೂ. 03 ಲಕ್ಷ ಮೌಲ್ಯ) ಚಿನ್ನಾಭರಣಗಳನ್ನು ಸುಲಿಗೆ ಮಾಡಿ, ಸಾಕ್ಷಿ ನಾಶಪಡಿಸಿದ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 22/2021, ಕಲಂ: 302, 392, 120 (ಬಿ), 201 ಜೊತೆಗೆ 34 ಐಪಿಸಿ ರಂತೆ ಪ್ರಕರಣ ದಾಖಲಾಗಿರುತ್ತದೆ.

ಸದ್ರಿ ಪ್ರಕರಣದಲ್ಲಿ ಆಗಿನ ಬಂಟ್ವಾಳ ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ ಪ್ರಸನ್ನ ಎಮ್.ಎಸ್. ರವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಆಗಿನ ಬಂಟ್ವಾಳ ಪೊಲೀಸ್ ವೃತ್ತ ನಿರೀಕ್ಷಕರಾದ ಟಿ.ಡಿ. ನಾಗರಾಜ್ ರವರು ಪ್ರಕರಣದ ತನಿಖೆ ನಡೆಸಿ, ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ, ಸದ್ರಿ ಮೂವರು ಆರೋಪಿಗಳ ವಿರುದ್ಧ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿರುತ್ತಾರೆ.

ಮಾನ್ಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ಮಂಗಳೂರಿನಲ್ಲಿ ಪ್ರಕರಣದ ವಿಚಾರಣೆ ನಡೆದು, ದಿನಾಂಕ: 28-07-2026 ರಂದು ಮಾನ್ಯ ನ್ಯಾಯಾಧೀಶರಾದ ಶ್ರೀ ಜಗದೀಶ್‌ ವಿ.ಎನ್. ರವರು ಪ್ರಕರಣದ ಮೂವರೂ ಆರೋಪಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿರುತ್ತಾರೆ.

ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಜ್ಯೋತಿ ಪ್ರಮೋದ್‌ ನಾಯಕ್‌ ರವರು ಮಾನ್ಯ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡನೆ ನಡೆಸಿರುತ್ತಾರೆ.

Home interiors
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments