ಮಂಗಳೂರು:ವಿಮಾನ ಪ್ರಯಾಣಿಕರ ಬ್ಯಾಗೇಜ್ ನಿಂದ ಚಿನ್ನಾಭರಣ ಕಳವು:ಬ್ಯಾಗೇಜ್ ನೌಕರರ ಬಂಧನ ಮತ್ತು ಚಿನ್ನಭರಣ ಹಾಗೂ ನಗದು ವಶ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಹಿಳಾ ಪ್ರಯಾಣಿಕರೊಬ್ಬರು ಆ.೩೦ರಂದು ಬೆಳಿಗ್ಗೆ ಬೆಂಗಳೂರಿನಿಂದAIR INDIA EXPRESS ವಿಮಾನದಲ್ಲಿ ಪ್ರಯಾಣ ಮಾಡಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ವಿಮಾನ ನಿಲ್ದಾಣದ ಬ್ಯಾಗೆಜ್ ಬೇಲ್ಟ್ ನಿಂದ ತಮ್ಮ ಲಗೇಜ್ ನ್ನು ಪಡೆದು ಚೆಕ್ ಮಾಡಿದಾಗ56 ಗ್ರಾಂ ತೂಕದ ಚಿನ್ನಾಭರಣ (ಮೌಲ್ಯ 4,50,೦೦೦/-) ಕಳವು ಆಗಿದ್ದು, ಈ ಬಗ್ಗೆ ಪ್ರಯಾಣಿಕರು ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ ಮೇರೆಗೆ ಅ.ಕ್ರ ೧೫೭/೨೦೨೫ ಕಲಂ ೩೦೩(೨) ಬಿ.ಎನ್.ಎಸ್ ರಂತೆ ಕಳವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.



ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ AIR INDIA SATS ಕಂಪೆನಿಯಲ್ಲಿ ಲೋಡರ್ ಅನಲೋಡರ್ ಕೆಲಸ ಮಾಡಿಕೊಂಡಿರುವ ಮಂಗಳೂರು ತಾಲೂಕು ಕಂದಾವರದ ನಿವಾಸಿ ೧) ನಿತಿನ್, ಮೂಡುಪೆರಾರದ ನಿವಾಸಿಗಳಾದ ೨) ಸದಾನಂದ ಮತ್ತು ೩) ರಾಜೇಶ್ ಮತ್ತು ಬಜಪೆ ನಿವಾಸಿ ೪)ಪ್ರವೀಣ್ ಫೆರ್ನಾಂಡಿಸ್ ರವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ದಿನಾಂಕ ೩೦-೦೮-೨೦೨೫ ರಂದು ವಿಮಾನದಲ್ಲಿದ್ದ ಲಗೇಜ್ ನಿಂದ ಚಿನ್ನಾಭರಣ ಕಳವು ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾರೆ. ಆರೋಪಿತರು ಮೂಡುಪೆರಾರದ ನಿವಾಸಿ ೫)ರವಿರಾಜ್ ಎಂಬಾತನಿಗೆ ಚಿನ್ನಾಭರಣವನ್ನು ಮಾರಿದ್ದು, ಆರೋಪಿತರಿಂದ ಸುಮಾರು 5 ಲಕ್ಷ ರೂಪಾಯಿ ಮೌಲ್ಯದ ೫೦ ಗ್ರಾಂ ಚಿನ್ನದ ಗಟ್ಟಿಯನ್ನು ವಶಪಡಿಸಿರುತ್ತೆ. ಸದ್ರಿ ರವಿರಾಜ್ ಎಂಬವನನ್ನು ಸಹ ಕಳವು ಮಾಲನ್ನು ಸ್ವೀಕರಿಸಿದ ೩೧೭(೨) ಬಿ.ಎನ್.ಎಸ್ ಆರೋಪದ ಮೇರೆಗೆ ಬಂಧಿಸಲಾಗಿದೆ.
ವಿಚಾರಣೆಯಲ್ಲಿ ಈ ಹಿಂದೆ ೨೦೨೫ ನೇ ಸಾಲಿನ ಜನವರಿ ತಿಂಗಳಿನಲ್ಲಿ ಇದೇ ರೀತಿ ಪ್ರಯಾಣಿಕರ ಮನೋಹರ್ ಶೆಟ್ಟಿ ರವರ ಬ್ಯಾಗಿನಿಂದ ಕಳವು ಮಾಡಿದ್ದ 2 ಲಕ್ಷ ರೂಪಾಯಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇದರ ಬಗ್ಗೆ ಈಗಾಗಲೇ ಬಜಪೆ ಪೊಲೀಸ್ ಠಾಣೆಯಲ್ಲಿ ಅ.ಕ್ರ ೨೭/೨೦೨೫ ಪ್ರಕರಣ ದಾಖಲಾಗಿ ತನಿಖೆ ಹಂತದಲ್ಲಿತ್ತು. ಈ ಎಲ್ಲಾ ಆರೋಪಿಗಳು ಸುಮಾರು ೯ ವರ್ಷಗಳಿಂದ AIR INDIA SATS ರಲ್ಲಿ ಕೆಲಸವನ್ನು ನಿರ್ವಹಿಸಿರುತ್ತಾರೆ. ಸದ್ರಿ ಎಲ್ಲಾ 5 ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿದ್ದು, ಹೆಚ್ಚಿನ ತನಿಖೆಯ ಬಗ್ಗೆ ಪೊಲೀಸ್ ವಶಕ್ಕೆ ಪಡೆಯಲಾಗುವುದು ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ