ಮಂಗಳೂರು ಜಂಕ್ಷನ್‍ನಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣ

ಮಂಗಳೂರು ಜಂಕ್ಷನ್‍ನಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಆಗಸ್ಟ್ 6ರಂದು ಶಿಲಾನ್ಯಾಸ ನೆರವೇರಲಿದೆ.\ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ರವರು ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಅಂತರಾಷ್ಟ್ರೀಯ ಮಟ್ಟದ ಈ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವು ಸುಮಾರು ರೂ. 19.32 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ. 2023-24ನೇ ಸಾಲಿನ ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಸೇರಿದಂತೆ ಮಂಗಳೂರು ಕೇಂದ್ರ ನಿಲ್ದಾಣ, ಬಂಟ್ವಾಳ ಹಾಗೂ ಸುಬ್ರಹ್ಮಣ್ಯ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಯಡಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದೆಂದು ಘೋಷಿಸಲಾಗಿತ್ತು. ಈ ಯೋಜನೆಯ ಇತರೆ ರೈಲು ನಿಲ್ದಾಣಗಳ ನಿರ್ಮಾಣ ಕಾರ್ಯ ಶೀಘ್ರದಲ್ಲಿಯೇ ಕೈಗೆತ್ತಿಕೊಳ್ಳಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

Related Posts

Leave a Reply

Your email address will not be published.