ಮಂಗಳೂರು: ರಾಜ್ಯಾದ್ಯಂತ “ಕುದ್ರು” ಸಿನಿಮಾ ಬಿಡುಗಡೆ
ಮೋಕ್ಷ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ಭಾಸ್ಕರ್ ನಾಯ್ಕ್ ರಚಿಸಿ ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿತು.
ನಗರದ ಭಾರತ್ ಮಾಲ್‍ನ ಬಿಗ್ ಸಿನಿಮಾಸ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ತೆಲಿಕೆದ ಬೊಳ್ಳಿ ನಟ ಡಾ. ದೇವದಾಸ್ ಕಾಪಿಕಾಡ್ ಅವರು ದೀಪ ಬೆಳಗಿಸುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ರು. ಈ ವೇಳೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಈ ಸಿನಿಮಾ ಯಶಸ್ಸು ಆಗಲಿ ಎಂದು ಶುಭ ಹಾರೈಸಿದರು.
ಚಿತ್ರದ ನಾಯಕ ನಟ ಹರ್ಷಿತ್ ಶೆಟ್ಟಿ ಹಾಗೂ ನಾಯಕಿ ಪ್ರಿಯಾ ಹೆಗ್ಡೆ ಅವರು ಮಾತನಾಡಿ, ಸಿನಿಮಾ ಉತ್ತಮವಾಗಿ ಮೂಡಿಬಂದಿದೆ. ಈ ಸಿನಿಮಾವನ್ನು ಸಿನಿ ಪ್ರೇಕ್ಷಕರು ಪ್ರೋತ್ಸಾಹಿಸಲಿದ್ದಾರೆ ಎಂದು ಅವರು ಹೇಳಿದರು.
ನಿರ್ದೇಶಕ ಹಾಗೂ ನಿರ್ಮಾಪಕ ಭಾಸ್ಕರ್ ನಾಯ್ಕ್ ಮಾತನಾಡಿ, ಹೊಸ ಪ್ರಯತ್ನದ ಮೂಲಕ ಚಿತ್ರವನ್ನು ನಿರ್ಮಾಣ ಮಾಡಲಾಗಿದೆ ಎಂದು ಅವರು ಹೇಳಿದರು.
ಸಮಾರಂಭದಲ್ಲಿ ವಿಶ್ವವಿದ್ಯಾಲಯ ಕಾಲೇಜಿನ ಪ್ರೋ ಲಕ್ಷ್ಮಣ್, ಕಲಾವಿದ ಪ್ರವೀಣ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು. ಸೂರಜ್ ಮಂಗಳೂರು ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಸಿನಿ ಪ್ರೇಕ್ಷಕರು ಕೂಡ ಸಿನಿಮಾದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಒಂದೊಂದು ದೃಶ್ಯವು ಉತ್ತಮವಾಗಿ ಮೂಡಿ ಬಂದಿದೆ ಎಂದು ಹೇಳಿದರು.
ಇನ್ನು ಸಿನಿಮಾಕ್ಕೆ ಛಾಯಾಗ್ರಹಣ ಪುರಾಣಿಕ್, ಪ್ರದೀಪ್ ಹಾಗು ಉಡುಪಿ ಪ್ರಜ್ವಲ್, ಪ್ರತೀಕ್ ಕುಂದು, ಸಂಗೀತ ನಿರ್ದೇಶನ ಹಾಗೂ ಶ್ರೀನಿವಾಸ್ ಕಲಾಲ್ ಅವರ ಸಂಕಲನವಿರುವ “ಕುದ್ರು” ಚಿತ್ರಕ್ಕೆ ಉಡುಪಿ ಕೃಷ್ಣ ಆಚಾರ್ ಸಂಭಾಷಣೆ ಬರೆದಿದ್ದಾರೆ. “ಕುದ್ರು ಎಂದರೆ ನೀರಿನಿಂದ ಸುತ್ತುವರೆದ ದ್ವೀಪ. ಈ ದ್ವೀಪದಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮೂರು ಕಟುಂಬಗಳು ಸಹಬಾಳ್ವೆಯಿಂದ ಜೀವನ ನಡೆಸುವ ಬಗ್ಗೆ ಚಿತ್ರದಲ್ಲಿ ಅದ್ಭುತವಾಗಿ ತೋರಿಸಲಾಗಿದೆ.
ಸಿನಿಮಾದಲ್ಲಿ ಕಾಣುವ ಒಂದು ದೃಶ್ಯವು ವಾಟ್ಸಪ್ ಸಂದೇಶವೊಂದರಿಂದ ಎಲ್ಲರಲ್ಲೂ ಮನಸ್ತಾಪವಾಗುವ ಕಥೆಯೂ ಸುಂದರವಾಗಿ ಮೂಡಿಬಂದಿದೆ. ಚಿತ್ರದ ಮೊದಲ ಭಾಗದ ಕಥೆ ಕಾಲೇಜಿನಲ್ಲಿ ನಡೆಯುತ್ತದೆ. ಆನಂತರ ಕುತೂಹಲ ಮೂಡಿಸುವ ಕಥಾಹಂದರವಿದೆ. ಇನ್ನು ಸಿನಿಮಾದಲ್ಲಿ ಕೊಟ್ಟಿರುವ ಪಾತ್ರಕ್ಕೆ ನಟರು ಅದ್ಭುತವಾಗಿ ಜೀವ ತುಂಬಿದ್ದಾರೆ.