ಮಂಗಳೂರು: ಎಂಡಿಎಂಎ’ ಮಾರಾಟ ಮಾಡುತ್ತಿದ್ದ ಡ್ರಗ್ಸ್ ಪೆಡ್ಲರ್ ಗಳ ಬಂಧನ

ಮಾದಕ ವಸ್ತು `ಸಿಂಥೆಟಿಕ್ ಡ್ರಗ್ಸ್ ಎಂಡಿಎಂಎ’ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ಸ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಸುರತ್ಕಲ್ ಕಾಟಿಪಳ್ಳ 2ನೇ ಬ್ಲಾಕ್‍ನ ಶಾಕೀಬ್ ಯಾನೆ ಶಬ್ಬು (33), ಚೊಕ್ಕಬೆಟ್ಟು 8ನೆ ಬ್ಲಾಕ್‍ನ ನಿಸಾರ್ ಹುಸೈನ್ ಯಾನೆ ನಿಚ್ಚು (34) ಬಂಧಿತ ಆರೋಪಿಗಳು. ಇವರಿಂದ ಒಟ್ಟು 52 ಗ್ರಾಂ ತೂಕದ 2,60,000 ರೂ.ಮೌಲ್ಯದ ಎಂಡಿಎಂಎ ಮಾದಕ ವಸ್ತು, ಕಾರು, 2 ಮೊಬೈಲ್ ಫೆÇೀನು, ನಗದು 1,800 ರೂ., ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 7,83,300 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ.

ಸುರತ್ಕಲ್ ತಡಂಬೈಲ್ ಪರಿಸರದ ಬೀಚ್ ರಸ್ತೆಯಲ್ಲಿ ಕಾರಿನಲ್ಲಿ ಇಬ್ಬರು ಅಕ್ರಮವಾಗಿ ಮಾದಕ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗಡೆ ನೇತೃತ್ವದ ಪೆÇಲೀಸ್ ತಂಡ ದಾಳಿ ನಡೆಸಿದೆ. ಆರೋಪಿಗಳ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತ್ತೆ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್.ಎಂ., ಎಸ್ಸೈಗಳಾದ ರಾಜೇಂದ್ರ ಬಿ., ಶರಣಪ್ಪ ಭಂಡಾರಿ, ಸುದೀಪ್ ಎಂ.ವಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Related Posts

Leave a Reply

Your email address will not be published.