HomeFresh Newsಮಂಗಳೂರು: ಜನರ ಪರವಾಗಿ ಸರ್ಕಾರವನ್ನು ಪ್ರಶ್ನಿಸುವುದು ತಪ್ಪೇ..? ಶಾಸಕ ಕಾಮತ್ ಪ್ರಶ್ನೆ

ಮಂಗಳೂರು: ಜನರ ಪರವಾಗಿ ಸರ್ಕಾರವನ್ನು ಪ್ರಶ್ನಿಸುವುದು ತಪ್ಪೇ..? ಶಾಸಕ ಕಾಮತ್ ಪ್ರಶ್ನೆ

ಜಿಲ್ಲೆಯಲ್ಲಿ ಮರಳು ಸಮಸ್ಯೆ ತೀವ್ರವಾಗಿದ್ದು, ಜನತೆ ಅದರಿಂದ ತೀವ್ರ ತೊಂದರೆ ಅನುಭವಿಸುತ್ತಿರುವಾಗ ಕ್ಷೇತ್ರದ ಒಬ್ಬ ಜವಾಬ್ದಾರಿಯುತ ಶಾಸಕನಾಗಿ ಸರ್ಕಾರದ ಗಮನಕ್ಕೆ ತರುವುದು ನನ್ನ ಕರ್ತವ್ಯ. ಆದರೆ ಕಾಂಗ್ರೆಸ್ ನಾಯಕರಿಗೆ ಅದು ತಪ್ಪಾಗಿ ಕಂಡಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಕ್ರೋಶ ವ್ಯಕ್ತಪಡಿಸಿದರು.

ಅವರು ಮಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ನಾಯಕರು ಈ ವಿಷಯದಲ್ಲಿ ಕನಿಷ್ಠ ಜ್ಞಾನವನ್ನಾದರೂ ಬೆಳೆಸಿಕೊಳ್ಳಬೇಕಾಗಿದೆ. ಆಡಳಿತ ಪಕ್ಷದಲ್ಲಿ ಇದ್ದುಕೊಂಡು ಉಂಟಾಗಿರುವ ಸಮಸ್ಯೆಯನ್ನು ಬಗೆಹರಿಸುವುದು ಬಿಟ್ಟು ಹಿಂದಿನ ಸರ್ಕಾರವನ್ನು ದೂರುವ ಅಗತ್ಯವೇನಿದೆ? ಅಷ್ಟಕ್ಕೂ ಜನರು ನಿಮಗೆ ಅಧಿಕಾರ ಕೊಟ್ಟದ್ದು ಜನರ ಸಮಸ್ಯೆಯನ್ನು ಸಮರ್ಪಕವಾಗಿ ಬಗೆಹರಿಸಲು ಹೊರತು ಹಿಂದಿನ ಕಥೆಗಳನ್ನು ಹೇಳುತ್ತಾ ಕೂರಲು ಅಲ್ಲ ಎಂಬುದನ್ನು ಕಾಂಗ್ರೆಸ್ಸಿಗರು ಮರೆಯಬಾರದು ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments