ದಿ.ವೇಣುಗೋಪಾಲರಿಗೆ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ ಸಭೆ
ಮಂಗಳೂರು :ಇತ್ತೀಚೆಗೆ ನಿಧನರಾದ ಮೂಡುಬಿದಿರೆ ಪ್ರೆಸ್‌ಕ್ಲಬ್‌ನ ಮಾಜಿ ಅಧ್ಯಕ್ಷ ವೇಣುಗೋಪಾಲ ಅವರಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬುಧವಾರ ನಗರದ ಪತ್ರಿಕಾ ಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ನುಡಿನಮನ ಸಲ್ಲಿಸಿದ ಮೂಡುಬಿದಿರೆಯ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ‘ ಜನಪರ ಕಾಳಜಿಯ ಯುವ ಪತ್ರಕರ್ತ ವೇಣುಗೋಪಾಲ್ ಅವರು ಮೂಡುಬಿದಿರೆ ಪ್ರೆಸ್‌ಕ್ಲಬ್ ಅಧ್ಯಕ್ಷರಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಪ್ರೆಸ್‌ಕ್ಲಬ್‌ಗೆ ಸ್ವಂತ ನಿವೇಶನ ಒದಗಿಸಲು ಶ್ರಮವಹಿಸಿದ್ದರು ಎಂದರು.
ಜಯಕಿರಣ ಪತ್ರಿಕೆಯ ಮಾಲೀಕ ಪ್ರಕಾಶ್ ಪಾಂಡೇಶ್ವರ , ಸಂಪಾದಕ ದಿತೇಶ್ ,ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. , ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಪ್ರೆಸ್‌ಕ್ಲಬ್ ಉಪಾಧ್ಯಕ್ಷ ಮಹಮ್ಮದ್ ಅರಿಫ್ ಪಡುಬಿದ್ರಿ, ಮೂಡಬಿದಿರೆ ತಾಲೂಕು ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ರೇಮಂಡ್ ತಾಕೊಡೆ, ಅಧ್ಯಕ್ಷ ಯಶೋಧರ ವಿ. ಬಂಗೇರ, ಕಾರ್ಯದರ್ಶಿ ಪ್ರೇಮಾಶ್ರೀ ಕಲ್ಲಬೆಟ್ಟು , ಸದಸ್ಯ ಪುನೀತ್ ಹಾಗೂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ ನುಡಿನಮನ ಸಲ್ಲಿಸಿದರು. ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.