ಮಂಗಳೂರು: ಗಲ್ಫ್ ರಾಷ್ಟ್ರಗಳಲ್ಲಿ ರಾಪಟ ಸಿನಿಮಾದ ಪ್ರೀಮಿಯರ್ ಶೋ

ಕೋಸ್ಟಲ್‍ವುಡ್‍ನ ಬಹುನಿರೀಕ್ಷಿತ ಸಿನಿಮಾ ರಾಪಟ. ಇನ್ನೇನು ಕೆಲವೇ ದಿನಗಳಲ್ಲಿ ಕರಾಳಿಯಾದ್ಯಂತ ರಾಪಟ ಸಿನಿಮಾ ತೆರೆಗೆ ಬರಲಿದೆ. ಈಗಾಗಲೇ ಗಲ್ಫ್ ರಾಷ್ಟ್ರಗಳಲ್ಲಿ ಪ್ರೀಮಿಯರ್ ಶೋ ದ ಟಿಕೆಟ್ ಬಿಡುಗಡೆ ಸಮಾರಂಭ ಅದ್ಧೂರಿಯಾಗಿ ನಡೆದಿದೆ.
ಬೊಳ್ಳಿ ಮೂವೀಸ್ ಹಾಗೂ ಅವಿಕ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ“ರಾಪಟ”

ರಾಪಟ ತುಳು ಸಿನಿಮಾ ಸೆಪ್ಟೆಂಬರ್ 9 ಮತ್ತು 10ರಂದು ಯುಎಇ, ಸೆ. 15ರಂದು ಬಹರೈನ್, ಸೆ.22ರಂದು ಮಸ್ಕತ್, ಸೆ.29ರಂದು ಕತಾರ್ ನಲ್ಲಿ ಪ್ರೀಮಿಯರ್ ಶೋ ನಡೆಯಲಿದೆ. ಅದಕ್ಕಾಗಿಯೇ ಚಿತ್ರತಂಡ ಎಲ್ಲಾ ತಯಾರಿಯನ್ನು ಮಾಡಿಕೊಂಡಿದೆ. ಈಗಾಗಲೇ ಚಿತ್ರದ ಕಾರ್ಟೂನ್ ಪೆÇೀಸ್ಟರ್ ಎಲ್ಲೆಡೆ ಗಮನ ಸೆಳೆಯುತ್ತಿದೆ.

ರಾಪಟ ಚಿತ್ರದಲ್ಲಿ ತುಳು ಚಿತ್ರ ರಂಗದ ದಿಗ್ಗಜರಾದ ದೇವದಾಸ್ ಕಾಪಿಕಾಡ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ಸಾಯಿ ಕೃಷ್ಣ ಕುಡ್ಲ, ದೀಪಕ್ ರೈ ಪಾಣಾಜೆ, ರೂಪಶ್ರೀ ವರ್ಕಾಡಿ ಮುಂತಾದವರು ನಟಿಸಿದ್ದು, ಅನೂಪ್ ಸಾಗರ್ ನಾಯಕ ನಟನಾಗಿ ಹಾಗೂ ನಿರೀಕ್ಷ ಶೆಟ್ಟಿ ನಾಯಕಿಯ ಪಾತ್ರದಲ್ಲಿದ್ದಾರೆ. ನಿರ್ಮಾಪಕರಾಗಿ ಸಂತೋಷ್ ಸುವರ್ಣ, ಸೂರ್ಯಕಾಂತ್ ಸುವರ್ಣ, ರಾಜನ್ ರಾಕೇಶ್ ಶೆಟ್ಟಿ, ಆಶಿಕಾ ಸುವರ್ಣ, ದೇವಿಕಾ ಆಚಾರ್ಯ, ಶೈಲ ರಾಜ್ ಪೂಜಾರಿ, ಅಭಿ ಶೆಟ್ಟಿ, ಮನೋಜ್ ಶೆಟ್ಟಿ, ಯಕ್ಷಿತ್ ಶೆಟ್ಟಿ, ಮಧು ಕುಮಾರ್ ಕಾರ್ಯನಿರ್ವಹಿಸಿದ್ದಾರೆ. ಇನ್ನೊಂದು ವಿಶೇಷವೆಂದರೆ ಆಗಸ್ಟ್ 27ರಂದು ದುಬೈನಲ್ಲಿ ರಾಪಟ ಸಿನಿಮಾ ಸಾಂಗ್ ಬಿಡುಗಡೆಗೊಳ್ಳಲಿದೆ. ಒಟ್ಟಿನಲ್ಲಿ ರಾಪಟ ತುಳು ಸಿನಿಮಾ ಹಾಸ್ಯ ಪ್ರಧಾನ ಚಿತ್ರವಾಗಿದ್ದು, ಸಿನಿ ಪ್ರೇಮಿಗಳನ್ನು ಮನರಂಜಿಸಲಿದ್ದಾರೆ.

Related Posts

Leave a Reply

Your email address will not be published.