ಮಂಗಳೂರು :ಮನಪಾ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆ
ಮಂಗಳೂರು ಮಹಾನಗರ ಪಾಲಿಕೆ ನಾಲ್ಕು ಸ್ಥಾಯೀ ಸಮಿತಿಗಳ ಅಧ್ಯಕ್ಷರ ಚುನಾವಣೆವು ನಗರದ ಪಾಲಿಕೆ ಕಚೇರಿಯಲ್ಲಿ ನಡೆಯಿತು.
ಪಟ್ಟಣ ಯೋಜನೆ ಹಾಗೂಸುಧಾರಣೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ವೀಣಾ ಮಂಗಳ, ತೆರಿಗೆ ನಿರ್ಧರಣೆ , ಹಣಕಾಸು ಹಾಗೂ ಅಪೀಲು ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮನೋಹರ ಶೆಟ್ಟಿ ಕದ್ರಿ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸುಮಿತ್ರ, ಲೆಕ್ಕ ಪತ್ರ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶರಿತಾ ಶಶಿಧರ್ ಅವರನ್ನು ಆಯ್ಕೆ ಮಾಡಲಾಯಿತು. ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳಿಗೆ ಸೆ.೧೮ರಂದು ಮೇಯರ್ ಚುನಾವಣೆಯದಂದು ತಲಾ ಏಳು ಸದಸ್ಯರಂತೆ 28 ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಅದರೆ ಅದೇ ದಿನವೇ ವಿಧಾನಪರಿಷತ್ ಉಪಚುನಾವಣೆ ದಿನಾಂಕ ನಿಗದಿಯಾಗಿ ಚುನಾವಣೆ ನೀತಿ ಸಂಹಿತೆ ಜಾರಿಯಾಗಿತ್ತು.ಈ ಕಾರಣಕ್ಕೆ ಪಾಲಿಕೆಯ ವಿವಿಧ ಸ್ಥಾಯೀ ಸಮಿತಿಗಳ ಅಧ್ಯಕ್ಷರ ನೇಮಕವಾಗಿರಲಿಲ್ಲ.
ಈ ಸಂದರ್ಭ ಮೇಯರ್ ಮನೋಜ್ ಕುಮಾರ್, ಉಪ ಮೇಯರ್ ಭಾನುಮತಿ ಉಪಸ್ಥಿತರಿದ್ದರು.