ಮತ್ತೊಮ್ಮೆ ಅವಕಾಶ ದೊರಕಿದ್ರೆ 2025ರ ವೇಳೆಗೆ ನಗರದ ಚಿತ್ರಣವೇ ಬದಲಾವಣೆ : ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್
ಶಾಸಕನಾಗಿ ಕಳೆದ ಐದು ವರ್ಷಗಳಲ್ಲಿ ಕ್ಷೇತ್ರಕ್ಕೆ 4500 ಕೋಟಿ ರೂ.ಗಳಿಗೂ ಅಧಿಕ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದು, 2000 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳು ನಡೆದಿದೆ. ಮತ್ತೊಮ್ಮೆ ಅವಕಾಶ ದೊರಕಿದರೆ 2025ರ ವೇಳೆಗೆ ಮಂಗಳೂರು ನಗರದ ಚಿತ್ರಣವೇ ಬದಲಾಗಲಿದೆ ಎಂದು ಕ್ಷೇತ್ರದ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಹೇಳಿದ್ದಾರೆ.
ನಗರದ ಅಟಲ್ ಸೇವಾ ಕೇಂದ್ರದಲ್ಲಿ ತನ್ನ ಐದು ವರ್ಷಗಳ ಅವಧಿಯಲ್ಲಿ ಮಾಡಲಾದ ಸಾಧನೆ ಹಾಗೂ ಅಭಿವೃದ್ದಿಯ ಕುರಿತಾದ `ಅಭಿವೃದ್ಧಿ ಪಥ ಪುಸ್ತಕ ಬಿಡುಗಡೆ ಬಳಿಕ ಸುದ್ದಿಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. ತನ್ನ ಅವಧಿಯಲ್ಲಿ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿ ಪರಿವರ್ತನೆಯ ರೀತಿಯಲ್ಲಿ ಕಾರ್ಯ ನಡೆಸಿರುವುದಾಗಿ ಹೇಳಿದ ಅವರು, ನಗರಕ್ಕೆ ಅತೀ ಮುಖ್ಯವಾದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಜಲಸಿರಿ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, 40 ಕ್ಕೂ ಅಧಿಕ ಓವರ್ ಹೆಡ್ ಟ್ಯಾಂಕ್‍ಗಳ ನಿರ್ಮಾಣದೊಂದಿಗೆ 792 ಕೋಟಿ ರೂ.ಗಳ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಿದರು. ಗೋಷ್ಟಿಯಲ್ಲಿ ಮೂಡ ಮಾಜಿ ಅಧ್ಯಕ್ಷ ರವಿಶಂಕರ ಮಿಜಾರು, ಮಾಜಿ ಮೇಯರ್ ದಿವಾಕರ್, ಮನಪಾ ಸದಸ್ಯರಾದ ಪ್ರೇಮಾನಂದ ಶೆಟ್ಟಿ, ರೂಪಾ ಡಿ. ಬಂಗೇರ, ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷ ನಿತಿನ್ ಕುಮಾರ್, ಮನಪಾ ಮಾಜಿ ಸದಸ್ಯ ವಿಜಯ ಕುಮಾರ್ ಶೆಟ್ಟಿ, ಸುಪ್ರಸಾದ್ ಶೆಟ್ಟಿ, ಸುರೇಂದ್ರ ಉಪಸ್ಥಿತರಿದ್ದರು.