ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಭಾರೀ ಡ್ರಗ್ಸ್ ಜಾಲ

ಮಂಗಳೂರಲ್ಲಿ ಭಾರೀ ಡ್ರಗ್ಸ್ ಮಾಫಿಯಾ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಖಾಸಗಿ ವೈದ್ಯಕೀಯ ಕಾಲೇಜಿನ ವೈದ್ಯರು, ವೈದ್ಯಕೀಯ ವಿದ್ಯಾರ್ಥಿ ಸಹಿತ 10 ಮಂದಿಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಕಾಲೇಜಿನ ಬಿಡಿಎಸ್ ವಿದ್ಯಾರ್ಥಿ, ವಿದೇಶಿ ಪ್ರಜೆ ನೀಲ್ ಕಿಶೋರಿಲಾಲ್ ರಾಮ್ ಜಿ ಶಾ , ಡಾ. ಸಮೀರ್ , ಡಾ. ಮಣಿಮಾರನ್ ಮುತ್ತು , ಡಾ. ನಾದಿಯಾ ಸಿರಾಜ್ , ಡಾ. ವರ್ಷಿನಿ ಪ್ರಥಿ, ಡಾ.ರಿಯಾ ಛಡ್ಡಾ, ಡಾ. ಭಾನು ದಹಿಯಾ, ಡಾ. ಕ್ಷಿಥಿಜ್ ಗುಪ್ತಾ, ಇರಾ ಬಾಸಿನ್ ಹಾಗೂ ಬಂಟ್ವಾಳದ ಮುಹಮ್ಮದ್ ರವೂಫ್ ಬಂಧಿತ ಆರೋಪಿಗಳು ಎಂದು ಅವರು ತಿಳಿಸಿದರು.

ಮಂಗಳೂರು ನಗರದ ಬಂಟ್ಸ್ ಹಾಸ್ಟೆಲ್ ಪರಿಸರದ ಫ್ಲಾಟ್ ವೊಂದರಲ್ಲಿ ಗಾಂಜಾವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಇನ್ ಸ್ಪೆಕ್ಟರ್ ಶ್ಯಾಮ್ ಸುಂದರ್ ಎಚ್ .ಎಂ. ರವರ ನೇತೃತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿ, ನೀಲ್ ಕಿಶೋರಿಲಾಲ್ ರಾಮ್ ಜಿ ಶಾ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದೆ. ಆತನಿಂದ ಒಟ್ಟು 2 ಕೆ.ಜಿ. ತೂಕದ ರೂ. 50,000 ಮೌಲ್ಯದ ಗಾಂಜಾ, 2 ಮೊಬೈಲ್ ಪೋನ್, 7,000 ರೂ., ಡಿಜಿಟಲ್ ತೂಕ ಮಾಪನ, ಆಟಿಕೆ ಪಿಸ್ತೂಲು ವಶಪಡಿಸಿಕೊಂಡು ಮಂಗಳೂರು ಪೂರ್ವ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉಳಿದ ಆರೋಪಿಗಳನ್ನು ನಗರದ ವಿವಿಧ ಹಾಸ್ಟೆಲ್, ಪಿಜಿ ಹಾಗೂ ಖಾಸಗಿ ನಿವಾಸಗಳಿಂದ ವಶಕ್ಕೆ ಪಡೆದುಕೊಳ್ಳಲಾಯಿತು ಎಂದು ಅವರು ತಿಳಿಸಿದರು.

Related Posts

Leave a Reply

Your email address will not be published.