ಮಂಜನಾಡಿ : ಸ್ಕೂಟರ್ ಮತ್ತು ಕಾರು ನಡುವೆ ಅಪಘಾತ, ಸ್ಕೂಟರ್ ಸವಾರ ಮೃತ್ಯು

ಉಳ್ಳಾಲ: ಬೈಕ್ ಗೆ ಕಾರು ಢಿಕ್ಕಿ ಹೊಡೆದು ಸ್ಕೂಟರ್ ಸವಾg,À ಹೊಟೇಲ್ ಉದ್ಯೋಗಿ ಹಾಗೂ ಝೊಮ್ಯಾಟೋ ಡೆಲಿವರಿ ಬಾಯ್ ಸಾವನ್ನಪ್ಪಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಮಂಜನಾಡಿ ಕಲ್ಕಟ್ಟ ಎಂಬಲ್ಲಿ ಸಂಭವಿಸಿದೆ.
ಮೂಲತ: ಕ್ಯಾಲಿಕಟ್ ನಿವಾಸಿ, ಕುತ್ತಾರು ಸಂತೋಷನಗರದ ಬಾಡಿಗೆ ಮನೆಯಲ್ಲಿ ಇದ್ದ ಅನಿಲ್ ಕುಮಾರ್ (41) ಮೃತರು. ಝೊಮ್ಯಾಟೋ ಸಂಸ್ಥೆಯಲ್ಲಿ ಡೆಲಿವರಿ ಬಾಯ್ ಹಾಗೂ ಸಂಜೆ ನಂತರ ದೇರಳಕಟ್ಟೆಯ ಜ್ಯೂಸ್ ಮ್ಯಾಜಿಕ್ ಹೊಟೇಲಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ರಾತ್ರಿ 11.00 ಸುಮಾರಿಗೆ ಮಂಜನಾಡಿಯ ಕಲ್ಕಟ್ಟದಿಂದ ಫುಡ್ ಡೆಲಿವರಿ ಆರ್ಡರ್ ಹಿಡಿದುಕೊಂಡು ತೆರಳುವ ಸಂದರ್ಭ ಎದುರಿನಿಂದ ಅಮಿತ ವೇಗದಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಕೇರಳ ನೋಂದಾಯಿತ ಅಬೂಬಕರ್ ಸಿದ್ದೀಖ್ ಎಂಬವರು ಚಲಾಯಿಸುತ್ತಿದ್ದ ಕಾರು ಅನಿಲ್ ಇದ್ದ ಸ್ಕೂಟರಿಗೆ ಢಿಕ್ಕಿ ಹೊಡೆದ ಪರಿಣಾಮ ಮನೆಯ ಕಂಪೌಂಡಿಗೆ ಎಸೆಯಲ್ಪಟ್ಟು, ಬಳಿಕ ರಸ್ತೆಗೆ ಉರುಳಿ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ಅಪಘಾತ ನಡೆದ ಕಾರಿನಲ್ಲೇ ಗಾಯಾಳುವನ್ನು ದೇರಳಕಟ್ಟೆಯ ಯೆನೆಪೆÇೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ನೀಡಿ ದೇರಳಕಟ್ಟೆ ಜ್ಯೂಸ್ ಮ್ಯಾಜಿಕ್ ಹೊಟೇಲ್ ಮ್ಹಾಲಕರಾದ ಶಾಜಿದ್ ಜಿ.ಎಂ ಮತ್ತು ಹಸನ್ ಎಂಬವರು ಹೆಚ್ಚಿನ ಚಿಕಿತ್ಸೆಗಾಗಿ ದೇರಳಕಟ್ಟೆಯ ಕ್ಷೇಮ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ತಡರಾತ್ರಿ 1.45ರ ಹೊತ್ತಿಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
