ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಶೀರ್ ಗೆ ನೆರವು ಹಸ್ತಾಂತರ

ಮಂಜೇಶ್ವರ : ಕಿಡ್ನಿ ವೈಫಲ್ಯಕ್ಕೊಳಗಾಗಿ ಚಿಕಿತ್ಸೆಯಲ್ಲಿರುವ ಮಂಜೇಶ್ವರದ ಕಾಂಗ್ರೆಸ್ ಕಾರ್ಯಕರ್ತ ಬಶೀರ್ ರವರಿಗೆ ಹರ್ಷಾದ್ ವರ್ಕಾಡಿಯವರ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಸಂಗ್ರಹಿಸಿದ ಚಿಕಿತ್ಸಾ ಸಹಾಯ ಮೊತ್ತವನ್ನು ಹಸ್ತಾಂತರಿಸಲಾಯಿತು.

ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಕಮಲಾಕ್ಷಿ. ಕೆ. ಅವರು 40,000 ರೂ. ಮೊತ್ತವನ್ನು ಬಶೀರ್ ರವರಿಗೆ ಹಸ್ತಾಂತರಿಸಿದರು. ಮಾಜಿ ಜಿ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ, ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರಿಫ್ ಮಚ್ಚಂಪಾಡಿ, ಮುಖಂಡರಾದ ಹನೀಫ್ ಶಾರ್ಜಾ, ಯೂತ್ ಕಾಂಗ್ರೆಸ್ ಮುಖಂಡ ಅನಸ್ ಇಡಿಯಾ ಮುಂತಾದವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.