ಮಂಜೇಶ್ವರ: ಸಾರ್ವಜನಿಕ ಸ್ಥಳಗಳಲ್ಲಿ ತಂದು ತ್ಯಾಜ್ಯ ಸುರಿಯುತ್ತಿರುವ ವಿಚಾರ, ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯಿತು ವ್ಯಾಪ್ತಿಯ 5 ಹಾಗೂ 7ನೇ ವಾರ್ಡ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯಗಳನ್ನು ತಂದು ಹಾಕಲಾಗುತ್ತಿದೆ. ಯತೀಂ ಖಾನ-ಗೇರುಕಟ್ಟೆ ರಸ್ತೆಯ ಅಂಬಿತ್ತಡಿ, ಹಾರ್ವಾರ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯಗಳು ತುಂಬಿ ದುರ್ವಾಸನೆ ಬೀರುತ್ತಿದೆ.

ಜನಸಂಚಾರವಿಲ್ಲದ ರಾತ್ರಿ ಸಮಯಗಳಲ್ಲಿ ಇಲ್ಲಿ ತ್ಯಾಜ್ಯಗಳನ್ನು ತಂದು ಹಾಕಲಾಗುತ್ತಿದೆ. ಸಾರ್ವಜನಿಕ ಸ್ಥಳ ಹಾಗೂ ರಸ್ತೆ ಬದಿಗಳಲ್ಲಿ ವ್ಯಾಪಕವಾಗಿ ತ್ಯಾಜ್ಯಗಳು ರಾಶಿ ಬಿದ್ದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮೂಗು ಮುಚ್ಚಿ ನಡೆದಾಡಬೇಕಾದ ಪರಿಸ್ಥಿತಿ ಬಂದೊದಗಿರುವುದಾಗಿ ಸ್ಥಳೀಯರು ಆರೋಪಿಸುತಿದ್ದಾರೆ.

ಸ್ಥಳೀಯರು ಕೆಲವೊಮ್ಮೆ ಸ್ವಚ್ಛಗೊಳಿಸಿದರೂ ಮತ್ತೆ ಅದೇ ಸ್ಥಳಗಳಲ್ಲಿ ತ್ಯಾವ್ಯಗಳನ್ನು ತಂದು ಸುರಿಯುವುದನ್ನು ಮುಂದುವರಿಸುತ್ತಾರೆ. ಈ ಕುರಿತು ಹಲವು ಬಾರಿ ವಾರ್ಡ್ ಸದಸ್ಯರಿಗೆ ದೂರು ನೀಡಿದರೂ ಯಾರೂ ಇತ್ತ ತಿರುಗಿ ನೋಡುತ್ತಿಲ್ಲ ಎಂದು ಸ್ಥಳೀಯರು ಹೇಳುತಿದ್ದಾರೆ. ಇಂತಹ ಜಾಗದಲ್ಲಿ ಕಣ್ಗಾವಲು ಕ್ಯಾಮೆರಾ ಅಳವಡಿಸಿ, ರಾತ್ರಿ ವೇಳೆ ತಪಾಸಣೆ ನಡೆಸಿ, ತ್ಯಾಜ್ಯ ಹಾಕುವವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Related Posts

Leave a Reply

Your email address will not be published.