ಮಂಜೇಶ್ವರ : ಶಸ್ತ್ರಾಸ್ತ್ರದೊಂದಿಗೆ ತಿರುಗಾಡುತ್ತಿದ್ದ ವ್ಯಕ್ತಿಯ ಬಂಧನ

ಮಂಜೇಶ್ವರ: ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಬಂದೂಕು ಹಾಗೂ ಶಸ್ತ್ರಾಸ್ತ್ರದೊಂದಿಗೆ ಉಪ್ಪಳದಲ್ಲಿ ತಿರುಗಾಡುತಿದ್ದ ಮೂವರನ್ನು ಮಂಜೇಶ್ವರ ಎಸ್ಸೈ ಅನ್ಸಾರ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಈ ತಂಡದಲ್ಲಿದ್ದ ಪ್ರಮುಖ ಆರೋಪಿ ಅಯಾಝ್ ಎಂಬಾತನನ್ನು ಆತನ ಸಹೋದರ ಪೊಲೀಸರಲ್ಲಿ ಬಲ ಪ್ರಯೋಗಿಸಿ ಬಿಡಿಸಿರುವುದಾಗಿ ಆರೋಪಿಸಲಾಗಿದೆ.

ಬಳಿಕ ಹೆಚ್ಚಿನ ಪೊಲೀಸರು ಸ್ಥಳಕ್ಕಾಗಮಿಸಿ ಆಟೋ ರಿಕ್ಷಾದಲ್ಲಿದ್ದ ಇಬ್ಬರನ್ನು ಹಾಗೂ ಆಯಾಝ್ ನ ಸಹೋದರನನ್ನು ಬಂಧಿಸಿದ್ದಾರೆ. ಮೊಹಮ್ಮದ್ ರಿಯಾಝ್ (25) ಮೊಹಮ್ಮದ್ ಹನೀಫ್ (40) ಹಾಗೂ ಆಯಾಝ್ ನ ಸಹೋದರ ರಿಯಾಝ್ (40) ಬಂಧಿತ ಆರೋಪಿಗಳು. ಇವರಿಂದ ರಿವಾಲ್ವರ್ ನಲ್ಲಿ ಹಾಕುವ ಗುಂಡು ಹಾಗೂ ಮಾಗಸಿನ್ ವಶಪಡಿಸಲಾಗಿದೆ. ಆರೋಪಿಗಳು ಉಪಯೋಗಿಸಿದ ಕಾರು ಹಾಗೂ ಆಟೋ ರಿಕ್ಷಾವನ್ನು ಪೊಲೀಸರು ವಶಕ್ಕೆ ತೆಗೆದಿದ್ದಾರೆ.

Related Posts

Leave a Reply

Your email address will not be published.