HomeFresh Newsಮಂಜೇಶ್ವರ: ಕುಳೂರು ಸಂತಡ್ಕದ 19ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಸಂಭ್ರಮ

ಮಂಜೇಶ್ವರ: ಕುಳೂರು ಸಂತಡ್ಕದ 19ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಸಂಭ್ರಮ

ಮಂಜೇಶ್ವರ ಕುಳೂರು ಸಂತಡ್ಕದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 19ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವನ್ನು ಸಂತಡ್ಕ ಶ್ರೀ ಅರಸು ಸಂಕಲ ದೈವ ಕ್ಷೇತ್ರದ ಪರಿಸರದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.

ಬೆಳಗ್ಗೆ ಗಣಪತಿಯ ಪ್ರತಿಷ್ಠಾಪನೆಗೊಂಡು, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ನಂತರ ಮೆರವಣಿಗೆ ವಾದ್ಯ ಘೋಷಣೆ ಭಜನಾ ತಂಡಗಳ ಪ್ರದರ್ಶನದೊಂದಿಗೆ ಹೊರಟ ವಿಸರ್ಜನಾ ಮೆರವಣಿಗೆಯು ಬಾಳ್ಯೂರು ಶ್ರೀ ಅಯ್ಯಪ್ಪ ಭಜನಾ ಮಂದಿರ ಸಂತಡ್ಕ ಬೇಳದ ಮೂಲಕ ರಸ್ತೆಯ ಇಕ್ಕೆಡೆಗಳಲ್ಲಿ ಸಾಗಿತು. ಶೋಭಾಯಾತ್ರೆ ತೆರಳುವ ರಸ್ತೆಯನ್ನು ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತು.

ರಸ್ತೆಯುದ್ದಕ್ಕೂ ಹಣ್ಣುಕಾಯಿ, ಆರತಿಯ ಮೂಲಕ ಸಾಗಿ ಪತ್ವಾಡಿ ಸೇತುವೆಯ ಸಮೀಪ ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ನೇತೃತ್ವದಲ್ಲಿ ಗಣಪತಿ ವಿಗ್ರಹ ವಿಸರ್ಜನೆಗೊಂಡಿತು.ಈ ಸಂದರ್ಭ ಸಮಿತಿಯ ಗೌರವಾಧ್ಯಕ್ಷರಾದ ಡಾ. ಎಂ. ಶ್ರೀಧರ ಭಟ್, ಸಮಿತಿಯ ಅಧ್ಯಕ್ಷರು, ಸದಸ್ಯರು ಹಾಗೂ ಭಕ್ತಾದಿಗಳು, ಗ್ರಾಮಸ್ಥರು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments