ಮಂಜೇಶ್ವರ: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರು ಢಿಕ್ಕಿ- ಗಂಭೀರ ಗಾಯ

ಮಂಜೇಶ್ವರ: ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಮಿತ ವೇಗದಿಂದ ಬಂದ ಇನೋವಾ ಕಾರೊಂದು ರಸ್ತೆದಾಟುತ್ತಿದ್ದ ವಿದ್ಯಾರ್ಥಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗಳೊಂದಿಗೆ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಉದ್ಯಾವರ ಮಾಡ ಕ್ಷೇತ್ರ ಸಮೀಪದ ರಘುನಾಥ ಆಳ್ವ ಎಂಬವರ ಪುತ್ರ ಮಂಗಳೂರು ನಿಟ್ಟೆ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸುಮಂತ್ (17) ಗಾಯಗೊಂಡ ವಿದ್ಯಾರ್ಥಿ. ಈತನನ್ನು ಸ್ಥಳೀಯರು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸುಮಂತ್‍ನ ತಲೆಗೆ ಗಂಭೀರ ಗಾಯಗಳಾಗಿರುವುದರಿಂದ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಲೇಜು ಮುಗಿಸಿ, ಮನೆಗೆ ಹಿಂತಿರುಗುವ ವೇಳೆ ಉದ್ಯಾವರ ಮಾಡದಲ್ಲಿ ಬಸ್ಸಿಳಿದು ರಾಷ್ಟ್ರೀಯ ಹೆದ್ದಾರಿಯಲ್ಲಿ ದಾಟುತ್ತಿರುವಾಗ ಇನೋವಾ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

Related Posts

Leave a Reply

Your email address will not be published.