ಮಂಜೇಶ್ವರ: ನವ ಕೇರಳ ಯಾತ್ರೆಗೆ ಸಿಎಂ ಪಿಣರಾಯಿ ವಿಜಯನ್ ಚಾಲನೆ

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಪೈವಳಿಕೆಗೆ ಆಗಮಿಸಿದ್ದ ನವ ಕೇರಳ ಯಾತ್ರೆಗೆ ಕೇರಳದ ಸಿಎಂ ಪಿಣರಾಯಿ ವಿಜಯ್ ಅವರು ಚಾಲನೆ ನೀಡಿದರು.

ರಾಜ್ಯ ಸರಕಾರದ ಅಭಿವೃದ್ದಿಯನ್ನು ಕೊಂಡಾಡಿದ ಮುಖ್ಯಮಂತ್ರಿಯವರು ಕೇಂದ್ರ ಸರಕಾರವನ್ನು ಹಾಗೂ ಯುಡಿಎಫ್‍ನ ಬಗ್ಗೆ ಅಸಮಧಾನ ವ್ಯಕ್ತಪಡಿಸಿ, ಅವರ ವಿರುದ್ಧ ಗಟ್ಟಿಯಾದ ಧ್ವನಿಯಲ್ಲಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಪ್ರತಿಯೊಂದು ವಿಧಾನ ಸಭಾ ಕ್ಷೇತ್ರದಲ್ಲೂ ರಾಜ್ಯ ಸರಕಾರ ಜಾರಿಗೆ ತಂದ ಯೋಜನೆಗಳು ಹಾಗೂ ಇನ್ನು ಮುಂದಕ್ಕೆ ಜಾರಿಗೊಸಲಿರುವ ಯೋಜನೆಗಳ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರುಗಳು ವಿವರಣೆ ನೀಡಿದರು. ಸಾವಜನಿಕರಿಂದ ದೂರುಗಳನ್ನು ಸ್ವೀಕರಿಸುವ ವ್ಯವಸ್ಥೆ ಕೂಡಾ ಮಾಡಲಾಗಿತ್ತು. ನವ ಕೇರಳ ಯಾತ್ರೆ ಎಲ್ಲಾ ವಿಧಾನ ಸಭಾ ಕ್ಷೇತ್ರಗಳಲ್ಲೂ ಸಂಚರಿಸಿ ತಿರುವನಂತಪುರದಲ್ಲಿ ಸಮಾಪ್ತಿಗೊಳ್ಳಲಿದೆ.

Related Posts

Leave a Reply

Your email address will not be published.