ಮಂಜೇಶ್ವರ|| ಸರ್ಕಾರಿ ಶಾಲೆಯಲ್ಲಿ ಶುಚಿತ್ವವಿಲ್ಲದ ಶೌಚಾಲಯ: ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಶಾಲಾ ಮಕ್ಕಳು

ಮಂಜೇಶ್ವರದ ಉಪಜಿಲ್ಲಾ ವ್ಯಾಪ್ತಿಯಲ್ಲಿರುವ ಸರಕಾರಿ ಶಾಲೆಗಳಲ್ಲಿ ಹಾಗೂ ಖಾಸಗಿ ಶಾಲೆಗಳ ಶೌಚಾಲಯಗಳಲ್ಲಿ ಶುಚಿತ್ವ ಇಲ್ಲದೇ ಇರುವುದು ಪೋಷಕರಲ್ಲಿ ಸಾಂಕ್ರಾಮಿಕ ರೋಗದ ಭೀತಿಯನ್ನು ಹೆಚ್ಚಿಸಿದೆ.

ಮಂಜೇಶ್ವರ ಉಪಜಿಲ್ಲೆಯ ವ್ಯಾಪ್ತಿಯಲ್ಲಿರುವ ಶಾಲೆಯೊಂದರಲ್ಲಿ ಶೌಚಾಲಯದಲ್ಲಿ ಮಾಲಿನ್ಯ ಕಟ್ಟಿ ನಿಂತು ದುರ್ವಾಸನೆಯಿಂದ ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ಎದುರಾಗಿದೆ. ಆದರೂ ಶಾಲೆಯ ಉಸ್ತುವಾರಿ ವಹಿಸಿಕೊಂಡಿರುವವರು ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಪೆÇೀಷಕರು ಆರೋಪಿಸುತ್ತಿದ್ದಾರೆ.

ಶಾಲಾ ಅಧ್ಯಾಪಕರುಗಳು ಸಿಬ್ಬಂದಿಗಳು ಉಪಯೋಗಿಸುವ ಶೌಚಾಲಯಗಳು ಶುಚಿತ್ವದಿಂದಿದ್ದು, ವಿದ್ಯಾರ್ಥಿಗಳಿಗೆ ಅಂತಹ ಶೌಚಾಲಯಗಳಿಗೆ ಪ್ರವೇಶವನ್ನು ನಿಷೇಧಿಸಿ ವಿದ್ಯಾರ್ಥಿಗಳಿಗೆ ಶುಚಿತ್ವ ಇಲ್ಲದ ಶೌಚಾಲಯಕ್ಕೆ ಕಳುಹಿಸುತ್ತಿದ್ದಾರೆ ಎಂದು ಪೋಷಕರು ಆರೋಪಿಸುತಿದ್ದಾರೆ.

ಇದೀಗ ಮಂಜೇಶ್ವರ ಸರಕಾರಿ ಶಾಲೆಯೊಂದರ ಶುಚಿತ್ವವಿಲ್ಲದೆ ಮಾಲಿನ್ಯ ಕಟ್ಟಿನಿಂತಿರುವ ವೀಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲಾಗುತ್ತಿದೆ. ವಿದ್ಯಾರ್ಧಿಗಳಿಗೆ ಶುಚಿತ್ವವನ್ನು ಕಲಿಸಬೇಕಾದ ಶಾಲೆಗಳಲ್ಲಿರುವ ಮೂಲಭೂತ ಸೌಕರ್ಯಗಳಲ್ಲೊಂದಾದ ಶೌಚಾಲಯಗಳಲ್ಲಿ ಶುಚಿತ್ವವನ್ನು ಕಾಪಾಡದೇ ಇರುವುದು ನಾಗರಿಕ ವಲಯಗಳಲ್ಲೂ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಸಂಬಂಧಪಟ್ಟ ಅಧಿಕಾರಿಗಳು ಇಂತಹ ಶಾಲೆಗಳಿಗೆ ಭೇಟಿ ನೀಡಿ, ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೆÇೀಷಕರು ಹಾಗೂ ಊರವರು ಆಗ್ರಹಿಸಿದ್ದಾರೆ.

Related Posts

Leave a Reply

Your email address will not be published.