HomeFresh Newsವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ಮಂಜುನಾಥ ಭಂಡಾರಿ ನೇಮಕ

ವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ಮಂಜುನಾಥ ಭಂಡಾರಿ ನೇಮಕ

ಕುಂದಾಪುರ:ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿಯವರನ್ನು ಹಕ್ಕು ಬಾಧ್ಯತಾ ಸಮಿತಿಯ ಅಧ್ಯಕ್ಷರನ್ನಾಗಿ ಕರ್ನಾಟಕ ವಿಧಾನ ಪರಿಷತ್‌ನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 194(4)ರ ಮೇರೆಗೆ ಸಭಾಪತಿಯವರು ನೇಮಕ ಮಾಡಿ ಆದೇಶಿಸಿದ್ದಾರೆ. ಸದಸ್ಯರಾಗಿ ಭಾರತಿ ಶೆಟ್ಟಿ, ಎಸ್.ವಿ. ಸಂಕನೂರ, ನಿರಾಣಿ ಹಣಮಂತ್ ರುದ್ರಪ್ಪ, ಶರವಣ ಟಿ.ಎ., ಡಾ. ಚಂದ್ರಶೇಖರ್ ಬಸವರಾಜ ಪಾಟೀಲ, ಕೆ.ಎಸ್. ನವೀನ್, ತಿಪ್ಪಣ್ಣಪ್ಪ ಕಮಕನೂರ, ರಾಮೋಜಿಗೌಡ ಅವರನ್ನು ನೇಮಿಸಲಾಗಿದೆ. ವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡ ಮಂಜುನಾಥ ಭಂಡಾರಿಯವರಿಗೆ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೇಸ್ ಜಿಲ್ಲಾಧ್ಯಕ್ಷರಾದ ವಿಶ್ವಾಸ್ ವಿ ಅಮೀನ್ ಅವರು ಶುಭಕೋರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments