ಕರಾವಳಿಗೆ ಭರಪೂರ ಕೊಡುಗೆ: ಮಂಜುನಾಥ ಭಂಡಾರಿ
ಮಂಗಳೂರು: ರಾಜ್ಯ ಸರಕಾರದ ಬಜೆಟ್ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಕೃಷಿ, ಮೀನುಗಾರಿಕೆ, ಉದ್ಯಮ, ಕೈಗಾರಿಕೆ ಸೇರಿದಂತೆ ಎಲ್ಲ ವಲಯಗಳಿಗೆ ಪ್ರೋತ್ಸಾಹ ನೀಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಹೇಳಿದರು.
ಅವರು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಅಯವ್ಯಯ ಬಗ್ಗೆ ಪ್ರತಿಕ್ರಿಯೆ ನೀಡಿದರು. ರೈತ ಮಹಿಳೆಯರಿಗೆ ಹಸು-ಎಮ್ಮೆ ಖರೀದಿಗೆ ಸಾಲ ಸೌಲಭ್ಯ, ಮತ್ಸ್ಯ ಆಶಾಕಿರಣ ಯೋಜನೆಯಡಿ ಕರಾವಳಿ ಮೀನುಗಾರರ ಪರಿಹಾರ ಮೊತ್ತ 3ಸಾವಿರ ರೂ. ಹೆಚ್ಚಳ, ಕರಾವಳಿಯಲ್ಲಿ ಬಲಿಷ್ಠವಾಗಿರುವ ಸ್ವಸಹಾಯ ಗುಂಪುಗಳಿಗೆ 10 ಕೋಟಿ ರೂ. ಮೀಸಲು, ಮಂಜೂರಿನಲ್ಲಿ ಹಜ್ ಭವನ, ಗ್ರಾಮ ಪಂಚಾಯಿತಿಗಳಲ್ಲಿ ಇ-ಆಫೀಸ್ ಆರಂಭ, ಅಂಗನವಾಡಿ ಕಾರ್ಯಕರ್ತರಿಗೆ ಉಚಿತ ಸ್ಮಾರ್ಟ್ ಫೋನ್, ಮಂಗಳೂರಿನಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ಸ್ಥಾಪನೆ, ಅಡಕೆ ರೋಗ ನಿಯಂತ್ರಣಕ್ಕೆ ಸಂಶೋಧನೆ ಹಾಗೂ ಸಸ್ಯ ಸಂರಕ್ಷಣೆ ಉತ್ತೇಜನ ನೀಡಲಾಗಿದೆ, ಕರಾವಳಿಯ ಹಿರಿಯ ಪತ್ರಕರ್ತ ರಘುರಾಮ ವಡ್ಡರ್ಸೆ ಹೆಸರಲ್ಲಿ ಪ್ರಶಸ್ತಿ, ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಆರಂಭಿಸಿರುವುದು ಒಳ್ಳೆಯ ಯೋಜನೆ ಎಂದರು.