ಒಟಿಟಿಯಲ್ಲಿ ಮಂಕುಭಾಯ್ ಫಾಕ್ಸಿ ರಾಣಿ ಸಿನಿಮಾ
ಬಿಗ್‌ಬಾಸ್ ಸೀಸನ್ 9ರ ವಿಜೇತ ನಟ ರೂಪೇಶ್ ಶೆಟ್ಟಿ ಅಭಿನಯದ ಮಂಕು ಭಾಯ್ ಫಾಕ್ಸಿ ರಾಣಿ ಕನ್ನಡ ಸಿನಿಮಾ ಇದೀಗ ಒಟಿಟಿಯಲ್ಲಿ ಲಭ್ಯವಿದೆ. ಅಮೆಜಾನ್ ಪ್ರೈಮ್‌ನಲ್ಲಿ ಸಿನಿ ಪ್ರೇಕ್ಷಕರು ಸಿನಿಮಾ ವೀಕ್ಷಿಸಲು ಅವಕಾಶ ಕಲ್ಪಿಸಿದ್ದಾರೆ.
ಕಳೆದ ವರ್ಷ ಸಿನಿಮಾ ಮಂದಿರದಲ್ಲಿ ಬಿಡುಗಡೆಗೊಂಡು ಪ್ರೇಕ್ಷಕರ ಮನಗೆದ್ದಿದ್ದ ಮಂಕು ಭಾಯ್ ಫಾಕ್ಸಿ ರಾಣಿ ಸಿನಿಮಾ ಓಟಿಟಿ ಪ್ಲಾಟ್ ಪಾಮ್‌ನಲ್ಲಿ ಲಭ್ಯವಿದೆ. ಇದೀಗ ಅಮೆಜಾನ್ ಪ್ರೈಮ್‌ನಲ್ಲಿ ವೀಕ್ಷಿಸಲು ಅವಕಾಶವಿದೆ.
ನಟ ರೂಪೇಶ್ ಶೆಟ್ಟಿ ನಾಯಕನಾಗಿ ಬಣ್ಣ ಹಚ್ಚಿದ್ದು, ಇವರಿಗೆ ಜೋಡಿಯಾಗಿ ಬ್ರಹ್ಮಗಂಟು ಸೀರಿಯಲ್ ಕಲಾವಿದೆ, ಬಿಗ್ ಬಾಸ್ ಕನ್ನಡ ಸೀಸನ್ 8ರ ಸ್ಪರ್ಧಿ ಗೀತಾ ಭಾರತಿ ಭಟ್ ಅಭಿನಯಿಸಿದ್ದಾರೆ. ಖ್ಯಾತ ಕಲಾವಿದ ಪ್ರಕಾಶ್ ತೂಮಿನಾಡ್, ಪಂಚಮಿ ರಾವ್, ಅರ್ಜುನ್ ಕಜೆ ತಾರಾಬಳಗದಲ್ಲಿದ್ದಾರೆ. ತುಳು ಸಿನಿಮಾಗಳಲ್ಲಿ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಗಗನ್ ಎಂ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಅವರ ನಿರ್ದೇಶನ ಮೊದಲ ಕನ್ನಡ ಸಿನಿಮಾವಾಗಿದೆ.
ಅಂದ್ಹಾಗೆ ’ಮಂಕು ಭಾಯ್ ಫಾಕ್ಸಿ ರಾಣಿ’ ಲವ್ ಸಸ್ಪೆನ್ಸ್ ಕಥಾಹಂದರ ಹೊಂದಿರುವ ಸಿನಿಮಾ. ಇದಕ್ಕೆ ಎಂ.ಕೆ .ಕೆ.ಷಹಜನ್ ಛಾಯಾಗ್ರಹಣ, ವಿನ್ಯಾಸ್ ಮದ್ಯ ಶಮೀರ್ ಮುಡಿಪು ಸಂಗೀತವಿದೆ. ಜೋಶ್ವ ಜೈಶಾನ್ ಕ್ರಾಸ್ತ ನಿರ್ಮಾಣ ಮಾಡಿರುವ ಈ ಚಿತ್ರದ ಫಸ್ಟ್ ಟ್ರ್ಯಾಕ್ ಭಾರೀ ಮೆಚ್ಚುಗೆ ಪಡೆದುಕೊಂಡಿದೆ. ಸೋನು ನಿಗಂ ಕಂಠದಲ್ಲಿ ಮೂಡಿಬಂದಿರುವ ಮಿಂಚಂತೆ ಮಿನುಗುತಿರೊ ಎಂಬ ಹಾಡು ಸಂಗೀತ ಪ್ರಿಯರನ್ನು ಮಂತ್ರ ಮುಗ್ದರನ್ನಾಗಿ ಮಾಡುತ್ತಿದೆ.ದಕ್ಷಿಣ ಕನ್ನಡ ಪರಿಸರದಲ್ಲಿ ಇಡೀ ಸಿನಿಮಾದ ಕಥೆ ನಡೆಯುವುದರಿಂದ ವಿಟ್ಲ, ಪುತ್ತೂರು, ಮಂಗಳೂರು ಸುತ್ತಮುತ್ತ ಚಿತ್ರದ ಬಹುತೇಕ ಚಿತ್ರೀಕರಣ ನಡೆದಿದೆ.
ವಿಭಿನ್ನ ಶೀರ್ಷಿಕೆಯಿಂದಲೇ ಸಿನಿ ಪ್ರೇಕ್ಷಕರನ್ನು ಚಿತ್ರದತ್ತ ಆಕರ್ಷಿಸುತ್ತಿರುವ ಮಂಕುಭಾಯ್ ಫಾಕ್ಸಿ ರಾಣಿ ಕನ್ನಡ ಸಿನಿಮಾವನ್ನು ಮನೆಯಲ್ಲೇ ಕೂತು ಅಮೆಜಾನ್ ಪ್ರೈಮ್‌ನಲ್ಲಿ ವೀಕ್ಷಿಸಬಹುದು. ಯಾರೆಲ್ಲಾ ಈ ಸಿನಿಮಾವನ್ನು ನೋಡಿಲ್ಲ ಅವರು ಇಂದೇ ಅಮೆಜಾನ್ ಪ್ರೈಮ್‌ನಲ್ಲಿ ಸಿನಿಮಾ ವೀಕ್ಷಿಸಿ ಚಿತ್ರತಂಡವನ್ನು ಪ್ರೋತ್ಸಾಹಿಸಬಹುದು.