ಫೆ.6ರಂದು ರಾಜ್ಯ ಸರ್ಕಾರದ ವಿರುದ್ಧ ಕಾರ್ಕಳದಲ್ಲಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಭ್ರಷ್ಟರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ,ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಕಾರ್ಕಳ ಬಿಜೆಪಿ ನೇತೃತ್ವದಲ್ಲಿ ಫೆ.6ರಂದು ಬೃಹತ್ ಪ್ರತಿಭಟನೆ ನಡೆಯಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ನಿರಂತರವಾಗಿ ಎಲ್ಲಾ ವಿಭಾಗಗಳಲ್ಲೂ ಬೆಲೆ ಏರಿಕೆಯನ್ನು ನಡೆಸುತ್ತಲೇ ಇದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದ ದಿನದಿಂದ ರಸ್ತೆ, ನೀರು, ಶಾಲಾ ಕಟ್ಟಡ ಹಾಗೂ ಇತರ ಅಭಿವೃದ್ಧಿ ಯಾವುದೇ ಅನುದಾನವನ್ನು ಬಿಡುಗಡೆ ಮಾಡುತ್ತಿಲ್ಲ. ಹಿಂದೂ ವಿರೋಧ ನೀತಿ ಅನುಸರಿಸುತ್ತಿದೆ. ಬಿಪಿಎಲ್ ಕಾರ್ಡ್‌ಗಳನ್ನು ವಿವಿಧ ನೆಪಗಳನ್ನು ನೀಡಿ, ಸರ್ಕಾರ ರದ್ದು ಮಾಡುವ ಕೆಲಸ ಮಾಡುತ್ತಿದೆ. ಅಕ್ರಮ ಸಕ್ರಮ ಅರ್ಜಿ ತಿರಸ್ಕಾರ ಹಾಗೂ ಹಾಲಿನ ಸಬ್ಸಡಿ ಬಾಕಿ ಸೇರಿದಂತೆ ಈವರೆಗೆ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 3540ಕ್ಕೂ ಅಧಿಕ ಅರ್ಜಿಗಳು ತಿರಸ್ಕೃತಗೊಳಿಸಲು ಶಿಫಾರಸ್ಸು ಮಾಡಲಾಗಿದ್ದು, ಮಾತ್ರವಲ್ಲದೇ ಕಾರ್ಕಳ ಪ್ರವಾಸೋದ್ಯಮಕ್ಕೂ ಅಡ್ಡಿ ಪಡಿಸಿದೆ ಎಂಬಿತ್ಯಾದಿಗಳನ್ನು ಮುಂದಿಟ್ಟುಕೊಂಡು ಬಿಜೆಪಿ ನೇತೃತ್ವದಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

add- arebhashe

Related Posts

Leave a Reply

Your email address will not be published.