ತಂಡದಿಂದ ಹಲ್ಲೆಗೊಳಗಾಗಿದ್ದ ಮಸೂದ್ ಚಿಕಿತ್ಸೆ ಫಲಿಸದೆ ಮೃತ್ಯು

ಕ್ಷುಲ್ಲಕ ಕಾರಣಕ್ಕೆ ನಡೆದ ಹೊಡೆದಾಟದಲ್ಲಿ ಗಂಭೀರ ಗಾಯಗೊಂಡಿದ್ದ ಮಸೂದ್(19) ರಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಜು.19 ರಂದು ಕಾಸರಗೋಡು ತಾಲೂಕು ಮೊಗ್ರಾಲ್ ಪುತ್ತೂರು ವಾಸಿ ಮಸೂದ್ ಮೇಲೆ ಕ್ಷುಲ್ಲಕ ಕಾರಣಕ್ಕಾಗಿ ಎಂಟು ಮಂದಿಯ ತಂಡ ಹಲ್ಲೆ ನಡೆಸಿತ್ತು. ಈ ವೇಳೆ ಗಂಭೀರ ಗಾಯಗೊಂಡಿದ್ದ ಮಸೂದ್ ನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಇಂದು ಚಿಕಿತ್ಸೆ ಫಲಕಾರಿಯಾಗದೆ ಆತ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ ಅಭಿಲಾಷ್, ಸುನಿಲ್, ಸುಧೀರ್, ಶಿವ, ರಂಜಿತ್, ಸದಾಶಿವ, ಜಿಮ್ ರಂಜಿತ್, ಭಾಸ್ಕರ ರನ್ನು ಪೆÇಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
