HomeFresh Newsಮಂಗಳೂರು - ಮೇರಿಹಿಲ್ , ಡಿವೈಡರಿಗೆ ಬೈಕ್ ಗುದ್ದಿ ಬಾಲಕರಿಬ್ಬರು ಬಲಿ

ಮಂಗಳೂರು – ಮೇರಿಹಿಲ್ , ಡಿವೈಡರಿಗೆ ಬೈಕ್ ಗುದ್ದಿ ಬಾಲಕರಿಬ್ಬರು ಬಲಿ

ಮಂಗಳೂರು: ನಗರದ ಮೇರಿಹಿಲ್ ವಿಕಾಸ್ ಕಾಲೇಜಿನ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರರಿಬ್ಬರು ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ಮೃತರನ್ನು ಸ್ಥಳೀಯ ನಿವಾಸಿಗಳಾದ ಪವನ್ ( 16) ಹಾಗೂ ಚಿರಾಗ್ ( 15) ಎಂದು ಗುರುತಿಸಲಾಗಿದೆ.

ಅಪಘಾತದಿಂದ ಒಬ್ಬ ಬಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ. ಗಾಯಗೊಂಡ ಇನ್ನೊಬ್ಬ ಬಾಲಕನನ್ನು ರಾಜಲಕ್ಷ್ಮೀ ಬಸ್ಸಿನಲ್ಲಿ ತಕ್ಷಣವೇ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆ ತಲುಪುವಷ್ಟರಲ್ಲಿ ಆತನೂ ಮೃತಪಟ್ಟಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ ಅಪಘಾತಕ್ಕೀಡಾದ ವಾಹನವು ಬೋಂದೆಲ್ ಪದವಿನಂಗಡಿಯ ಕುಶಾಲ್ ಕುಮಾರ್ ಅವರ ಹೆಸರಿನಲ್ಲಿದೆ ಎಂದು ಗೊತ್ತಾಗಿದೆ..

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments