ಮಿಲಾಗ್ರಿಸ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ
ಮಂಗಳೂರು ಮಿಲಾಗ್ರಿಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ 2022-23 ನೆ ಸಾಲಿನ ಚಟುವಟಿಕೆಗಳ ಉದ್ಘಾಟನೆ ನೆರವೇರಿತು.
ಕೆನರಾ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕಿ, ಅಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಯೋಜನಾಧಿಕಾರಿಗಳಾದ ಸೀಮಾ ಪ್ರಭು ಎಸ್ ಅವರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಎನ್ನೆಸ್ಸೆಸ್ ನಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸನವಾಗುವುದರ ಜೊತೆಗೆ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಲು ಸಾಧ್ಯ’ ಎಂದು ತಿಳಿಸಿದರು. ಉಪ ಪ್ರಾಂಶುಪಾಲರಾದ ಶ್ರೀಯುತ ಕ್ಯಾಸ್ಟಿನ್ ರೊಡ್ರಿಗಸ್ ಎಲ್ಲರನ್ನುದ್ದೇಶಿಸಿ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವ ಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಕು. ಶ್ರಾವ್ಯ ಎನ್ ಸಹ ಯೋಜನಾಧಿಕಾರಿ ಜೋಬಿನ್ ಜೋಸೆಫ್ ಸೇರಿದಂತೆ ಎಲ್ಲ ಸಿಬ್ಬಂದಿವರ್ಗವು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ವಿದ್ಯಾರ್ಥಿ ಪ್ರತಿನಿಧಿಯಾದ ವಿವಿತ್ ಫರ್ನಾಂಡಿಸ್ ಸ್ವಾಗತಿಸಿದರು.ವಿದ್ಯಾರ್ಥಿ ಪ್ರತಿನಿಧಿಯಾದ ಯುತ್ತಾ ನಾಯ್ಕ ವಂದಿಸಿದರು. ಡೆನ್ಸನ್ ಡಿಸಿಲ್ವ ಕಾರ್ಯಕ್ರಮವನ್ನು ನಿರೂಪಿಸಿದರು.