ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಸಚಿವ ಎಸ್. ಅಂಗಾರ

ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಅಂಗಾರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಠರದ ಅಲ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಬುಧವಾರ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಅವರು ಆರೋಗ್ಯದಿಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
