HomeFresh Newsಕುಕ್ಕೆ ಸುಬ್ರಹ್ಮಣ್ಯಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ

ಸುಬ್ರಹ್ಮಣ್ಯ: ಉಡುಪಿ ಜಿಲ್ಲೆಯ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಚಿವ ವಿ.ಸುನಿಲ್ ಕುಮಾರ್ ಮಂಗಳವಾರ ರಾತ್ರಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದರು. ಬುಧವಾರ ಬೆಳಗ್ಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದರುಶನ ಪಡೆದು, ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದು, ಪ್ರಸಾದ ಸ್ವೀಕರಿಸಿದರು. ಕುಕ್ಕೆಯಲ್ಲಿ ಸುನಿಲ್ ಕುಮಾರ್ ಶೇಷ ಸೇವೆ ನೆರವೇರಿಸಿದರು. ಬಳಿಕ ಆದಿ ಸುಬ್ರಹ್ಮಣ್ಯಕ್ಕೆ ತೆರಳಿ ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.

ದೇವಸ್ಥಾನದ ವತಿಯಿಂದ ಸುನಿಲ್ ಕುಮಾರ್ ಅವರನ್ನು ಗೌರವಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸದಸ್ಯರಾದ ವನಜಾ ವಿ.ಭಟ್, ಮನೋಜ್ ಕುಮಾರ್, ದೇವಸ್ಥಾನದ ಅಧಿಕಾರಿಗಳು, ಸಿಬ್ಬಂದಿಗಳು, ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬಳಿಕ ಸುನಿಲ್ ಕುಮಾರ್ ಸುಬ್ರಹ್ಮಣ್ಯ ಸಮೀಪದ ದೇವರಗದ್ದೆ ಸ್ವಾಮಿ ಕೊರಗಜ್ಜ ದೈವದ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ಕ್ಷೇತ್ರದವರು ಉಪಸ್ಥಿತರಿದ್ದರು. ನಾಮ ಪತ್ರ ಸಲ್ಲಿಕೆಗೆ ಮೊದಲು ಪುಣ್ಯ ಕ್ಷೇತ್ರಗಳ ಸಂದರ್ಶನ ನಡೆಸುತ್ತಿದ್ದಾರೆ ಎನ್ನಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments