ವಿಟ್ಲ: ಮಿತ್ತೂರು ಫ್ರೀಡಂ ಕಮ್ಯುನಿಟಿ ಹಾಲ್ ಎನ್.ಐ ಎ ವಶಕ್ಕೆ

ವಿಟ್ಲ: ಫ್ರೀಡಂ ಎಜ್ಯುಕೇಷನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಒಡೆತನಕ್ಕೆ ಸೇರಿದ ಫ್ರೀಡಂ ಕಮ್ಯುನಿಟಿ ಹಾಲ್ ಇಡ್ಕಿದು ಗ್ರಾಮದ 213ನೇ ಸರ್ವೇ ನಂಬರ್ ನಲ್ಲಿ ಸುಮಾರು 0.20 ಎಕ್ರೆ ಜಾಗದಲ್ಲಿದ್ದು, ಪಿ.ಎಫ್.ಐ. ಸದಸ್ಯರಿಗೆ ಭಯೋತ್ಪಾದನಾ ಚಟುವಟಿಕೆ ನಡೆಸಲು ಶಸ್ತ್ರಾಸ್ತ್ರ ತರಬೇತಿಯನ್ನು ನೀಡುತ್ತಿದೆ ಎಂದು ತನಖೆ ನಡೆಸಿ, ಎನ್. ಐ. ಎ. ಕಾನೂನು ಬದ್ಧವಾಗಿ ವಶಕ್ಕೆ ಪಡೆದುಕೊಂಡಿದೆ.

1967 ರ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ ಕಲಂ 25ರ ಅನ್ವಯ ಕೃತ್ಯಕ್ಕೆ ಬಳಸಿದ ಹಾಲ್ ಸಹಿತ ಜಾಗವನ್ನು ಎನ್. ಐ. ಎ. ತನ್ನ ಸ್ವಾಧೀನಕ್ಕೆ ಪಡೆದುಕೊಂಡಿದೆ. ಜಮೀನನ್ನು ಬೇರೆಯವರಿಗೆ ಮಾರಾಟ ಮಾಡುವ, ವರ್ಗಾವಣೆ ಮಾಡುವ, ಲೀಸ್ ಮಾಡುವ ಹಾಗೂ ಇನ್ಯಾವುದೇ ರೀತಿಯ ಬದಲಾವಣೆ ಮಾಡುವುದನ್ನು ನಿರ್ಬಂಧಿಸಲಾಗಿದೆ.

ಬಿಜೆಪಿ ದ.ಕ. ಯುವ ಮೋರ್ಚಾ ಪದಾಧಿಕಾರಿ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಬೆಂಗಳೂರು ವಿಭಾಗ ಎನ್.ಐ.ಎ ಯ ಮುಖ್ಯ ತನಿಖಾಧಿಕಾರಿ ಷಣ್ಮುಗಂ ಎಂ. ಅವರು ಪ್ರೀಡಂ ಎಜ್ಯುಕೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಕಾರ್ಯದರ್ಶಿ ಅಬ್ದುಲ್ ಸಿದ್ದೀಕ್ ಅವರಿಗೆ ನೋಟೀಸ್ ಜಾರಿಗೊಳಿಸಿ ಆದೇಶಿಸಿದ್ದಾರೆ.

Related Posts

Leave a Reply

Your email address will not be published.