ಶಾಸಕ ಡಾ. ವೈ ಭರತ್ ಶೆಟ್ಟಿ ಅವರಿಂದ ಕುಳಾಯಿ ಜಂಕ್ಷನ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಳಾಯಿ ಜಂಕ್ಷನ್ ಅಭಿವೃದ್ಧಿ ಕಾಮಗಾರಿಗೆ ಶಾಸಕರಾದ ಡಾ.ಭರತ್ ಶೆಟ್ಟಿಯವರು ಗುದ್ದಲಿಪೂಜೆಗೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಭರತ್ ಶೆಟ್ಟಿಯವರು ಕುಳಾಯಿ ಹೆದ್ದಾರಿ ವಿದ್ಯಾನಗರ ರಸ್ತೆ ನಡುವೆ ಜಂಕ್ಷನ್ ಅಭಿವೃದ್ಧಿಯಾಗಲಿದ್ದು, ಅಪಘಾತ ರಹಿತ ವಲಯವನ್ನಾಗಿ ಮಾಡಲು ಯೋಜನೆ ರೂಪಿಸಲಾಗಿದೆ. ಸುರತ್ಕಲ್ ಜಂಕ್ಷನ್ ಬಳಿಕ ಸುರತ್ಕಲ್ ನ ಟ್ರಾಫಿಕ್ ಐಲ್ಯಾಂಡ್ ಕಾಮಗಾರಿಯನ್ನು ನಡೆಸಲಾಗುವುದು ಎಂದರು.

ಭಾರತದ 75 ನೆಯ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಸುರತ್ಕಲ್ ಬೀಚಿನಲ್ಲಿ ರಾಷ್ಟ್ರೀಯತೆಯನ್ನು ಪ್ರತಿಬಿಂಬಿಸುವ ಬೃಹತ್ ಕಾರ್ಯಕ್ರಮವನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವತಿಯಿಂದ ಹಮ್ಮಿಕೊಳ್ಳಲಾಗಿದೆ. ದೇಶಭಕ್ತಿಯ ಸಂಕೇತವಾಗಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಮೇಯರ್ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಸುಮಂಗಲಾ ರಾವ್, ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯರಾದ ವರುಣ್ ಚೌಟ, ವೇದಾವತಿ, ಸ್ಥಳೀಯಭಾಗದ ಮನಪಾ ಸದಸ್ಯರುಗಳು ಹಾಗೂ ಬಿಜೆಪಿಯ ಮುಖಂಡರು, ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.