HomeFresh Newsರಾಷ್ಟ್ರೀಯ ಹೆದ್ದಾರಿ 66 ಕ್ಕೆ ಸಂಬಂಧಿಸಿದಂತೆ ಇಲಾಖಾಧಿಕಾರಿಗಳ ಸಭೆ - ಶಾಸಕ ಗುರ್ಮೆ ಸುರೇಶ್ ಶೆಟ್ಟಿ...

ರಾಷ್ಟ್ರೀಯ ಹೆದ್ದಾರಿ 66 ಕ್ಕೆ ಸಂಬಂಧಿಸಿದಂತೆ ಇಲಾಖಾಧಿಕಾರಿಗಳ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಭಂದಿಸಿದಂತೆ ಜಿಲ್ಲಾಧಿಕಾರಿಗಳಾದ ಕೋರ್ಟ್ ಹಾಲ್ ಕಚೇರಿಯಲ್ಲಿ ಇಂದು ದಿನಾಂಕ 02-09-2025 ರಂದು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.ಸಭೆಯಲ್ಲಿ ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಮಂಜೂರಾಗಿದ್ದು ಶೀಘ್ರದಲ್ಲೇ ಕಾಮಗಾರಿ ಆರಂಭಿಸುಂತೆ ಜೊತೆಗೆ ಸಂಚಾರಕ್ಕೆ ಬದಲಿ ರಸ್ತೆ ಗುರುತಿಸುವಂತೆ ಮತ್ತು ಉಚ್ಚಿಲ ಹಾಗೂ ಪಡುಬಿದ್ರಿ ಜಂಕ್ಷನ್ ಬಳಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಿದ್ದು ಇದರ ತಡೆಗೆ ಬೀದಿ ದೀಪ ಮತ್ತು ಬ್ಯಾರಿಗೇಟ್ ಅಳವಡಿಸುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಸಹಾಯಕ ಆಯುಕ್ತರಾದ ರಶ್ಮಿ, ಪೋಲಿಸ್ ವರಿಷ್ಠಾಧಿಕಾರಿಗಳಾದ ಹರಿರಾಮ್ ಶಂಕರ್ ಹಾಗೂ ರಾಷ್ಟ್ರೀಯ ಹೆದ್ದಾರಿ ಗೆ ಸಂಬಂಧಿಸಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

add - S.L Shet ..march 2025
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments