ಉಡುಪಿ: ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶಿರೂರು ಮಠದ ಆಶ್ರಯದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಸಹಯೋಗದಲ್ಲಿ ಇಂದು ದಿನಾಂಕ 31-05-2026 ರಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಲಾದ “ಯಕ್ಷಗಾನ ಕಲಾವಿದರ ವಾರ್ಷಿಕ ಸಮಾವೇಶ”ದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು. ಪರ್ಯಾಯ ಶ್ರೀ ಶಿರೂರು ಮಠದ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಆಶೀರ್ವಚಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ, ಉದ್ಯಮಿಗಳಾದ ಹರಿಯಪ್ಪ ಕೋಟ್ಯಾನ್, ಆನಂದ ಪಿ ಸುವರ್ಣ, ಪಿ ಪುರುಶೋತ್ತಮ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್, ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ ರಾವ್, ಕಾರ್ಯದರ್ಶಿಗಳಾದ ಮುರಲಿ ಕಡೆಕಾರ್ ಹಾಗೂ ಗಣ್ಯರು ಉಪಸ್ಥಿತರಿದ್ದರು.
