ಉಡುಪಿ, ಅ. 7: ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ ಇಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆಯಿತು. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ಪ್ರವಾಸಿ ತಾಣಗಳ ಅಭಿವೃದ್ಧಿ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ, ಕಾಪು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಪ್ರವಾಸಿ ತಾಣಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕುರಿತು ಚರ್ಚಿಸಿದರು. ಪ್ರವಾಸಿಗರಿಗೆ ಅಗತ್ಯ ಮೂಲಸೌಕರ್ಯ, ಪ್ರವಾಸಿ ಸೌಲಭ್ಯಗಳು ಹಾಗೂ ಕ್ಷೇತ್ರದ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಕ್ರಮಗಳ ಬಗ್ಗೆ ಅವರು ಗಮನ ಸೆಳೆದರು.
ಸಭೆಯಲ್ಲಿ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ಸಹಾಯಕ ಆಯುಕ್ತೆ ರಶ್ಮಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾಪು ಸೇರಿದಂತೆ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಿತು.
ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ,ಪ್ರವಾಸಿ ತಾಣಗಳ ಅಭಿವೃದ್ಧಿಗೆ ಒತ್ತು ನೀಡುವಂತೆ ಸಲಹೆ
RELATED ARTICLES

