ಜೂ.21 ಭಾನುವಾರದಂದು ಸಂಭವಿಸಿದ ಸಿಡಿಲು ಬಡಿತದಿಂದ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀಧರ್ ಕುಲಾಲ್ ಅವರ ಮನೆಗೆ ಹಾನಿಯಾಗಿದ್ದು ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಸಕರು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಕರೆ ಮಾಡಿ ಮನೆಗೆ ಹಾನಿಯಾಗಿದ್ದು ಗರಿಷ್ಠ ಪರಿಹಾರ ನೀಡುವಂತೆ ಮತ್ತು ಹಾನಿಯಾದ ವಸ್ತುಗಳ ದುರಸ್ತಿಗೆ ಪರಿಹಾರ ನೀಡುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಕುತ್ಯಾರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಭಾರತಿ, ಮಾಜಿ ಸದಸ್ಯರಾದ ದೇವರಾಜ್ ಬಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


