ಶಾಸಕ ಹರೀಶ್ ಪೂಂಜ ನಾಮಪತ್ರ ಸಲ್ಲಿಕೆ
ಬೆಳ್ತಂಗಡಿ: ವಿಧಾನಸಭಾ ಚುನಾವಣೆಗೆ ಬೆಳ್ತಂಗಡಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ, ಶಾಸಕ ಹರೀಶ್ ಪೂಂಜರವರು ಇಂದು ಬೆಳ್ತಂಗಡಿ ಚುನಾವಣಾ ಅಧಿಕಾರಿ ಯೋಗೇಶ್.ಹೆಚ್.ಆರ್ ಅವರಿಗೆ ನಾಮಪತ್ರ ಸಲ್ಲಿಸಿದರು.
ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಹಿರಿಯ ವಕೀಲ ಸುಬ್ರಹ್ಮಣ್ಯ ಕುಮಾರ್ ಅಗರ್ತ ಮತ್ತು ಹಿರಿಯ ಮುಂದಾಳು ಕುಶಾಲಪ್ಪ ಗೌಡ ಪೂವಾಜೆ ಉಪಸ್ಥಿತಿಯಲ್ಲಿ ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದರು.