ಶಾಸಕ ಹರೀಶ್ ಪೂಂಜರಿಗೆ ಜೀವ ಬೆದರಿಕೆ ಒಡ್ಡಿದ ಆರೋಪಿಯ ಬಂಧನ

ಬಂಟ್ವಾಳ: ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶುಕ್ರವಾರ ರಾತ್ರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಅವರು, ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಫಳ್ನೀರು ನಿವಾಸಿ ರಿಯಾಜ್ (38) ಎಂಬಾತನನ್ನು ಬಂಧಿಸಲಾಗಿದ್ದು, ಘಟನೆಗೆ ಸಂಬಂಧಿಸಿ ಸ್ಜಾರ್ಫಿಯೋ ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಆರೋಪಿಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇದುವರೆಗೂ ಇರಲಿಲ್ಲ ಹಾಗೂ ಯಾವುದೇ ಆಯುಧಗಳು ಆತನ ಬಳಿ ಇರಲಿಲ್ಲ. ರಸ್ತೆಯಲ್ಲಿ ವಾಹನ ಓವರ್ ಟೇಕ್ ಮಾಡುವ ಸಂದರ್ಭದ ಜಗಳ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದ್ದು, ಮತ್ತಷ್ಟು ತನಿಖೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಗುರುವಾರ ರಾತ್ರಿ ಸುಮಾರು 11.15ಕ್ಕೆ ಘಟನೆ ನಡೆದಿದ್ದು, ಪೂಂಜಾ ಚಾಲಕ ದೂರಿನಂತೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಘಟನೆ ನಡೆದಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

Related Posts

Leave a Reply

Your email address will not be published.