ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ನಾಮಪತ್ರ ಸಲ್ಲಿಕೆ

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ಅವರು ಬೃಹತ್ ಪಾದಯಾತ್ರೆ ಮೂಲಕ ಇಂದು ನಾಮಪತ್ರ ಸಲ್ಲಿಸಿದರು. ಮೊದಲಿಗೆ ಕುದ್ರೋಳಿಯ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಬೃಹತ್ ಕಾರ್ಯಕರ್ತರ ಮೆರವಣಿಗೆ ಮೂಲಕ ಸಾಗಿ ಮಂಗಳೂರಿನ ಪಾಲಿಕೆ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಡಿ ವೇದವ್ಯಾಸ ಕಾಮತ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಾಥ್ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿ ಅವರು, ಇವತ್ತು ಎರಡನೇ ಬಾರಿಗೆ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಿದ್ದೇನೆ. ನಗರದ ಪ್ರಮುಖ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದೇನೆ. ಸರಿಸುಮಾರು ನೂರಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ವೇದವ್ಯಾಸ ಕಾಮತ್ ಅವರು ಗೆಲ್ಲಬೇಕು ಎಂಬ ದೃಷ್ಟಿಯಿಂದ ಕಾರ್ಯಕರ್ತರು ದೇವಸ್ಥಾನದ ಅರ್ಚಕರು ಪೂಜೆಯನ್ನು ಸಲ್ಲಿಸುತ್ತಿರುವುದು ಖುಷಿ ಕೊಟ್ಟಿದೆ ಎಂದರು.

ಆನಂತರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ವೇದವ್ಯಾಸ ಕಾಮತ್ ಅವರು ಕಳೆದ 5 ವರ್ಷಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿ ರಾಜ್ಯದಲ್ಲಿ ಬಿಜೆಪಿ ಪರವಾಗಿರುವ ಅಲೆ ಇದೆ. ಬಹುಮತದಿಂದ ಮತ್ತೆ ನಾವು ಸರ್ಕಾರವನ್ನು ರಚನೆ ಮಾಡುತ್ತೇವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ವಿಜಯ ಕುಮಾರ್ ಶೆಟ್ಟಿ, ರವಿಶಂಕರ್ ಮಿಜಾರ್, ಮೋನಪ್ಪ ಭಂಡಾರಿ, ರಾಜಗೋಪಾಲ್ ರೈ, ರೂಪಾ ಡಿ ಬಂಗೇರ, ನಿತಿನ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.