ರಾಜ್ಯದ ಆರ್ಥಿಕತೆಗೆ ಚೈತನ್ಯ: ಹರೀಶ್ ಕುಮಾರ್
ಮಂಗಳೂರು: ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಅಭಿವೃದ್ಧಿ ಶಕೆಯೇ ಆರಂಭವಾಗಿದೆ. ಇಂದು ಮಂಡಿಸಿದ ಬಜೆಟ್‌ನಲ್ಲಿ ರಾಜ್ಯದ ಆರ್ಥಿಕತೆಗೆ ಚೈತನ್ಯ ತುಂಬಿದೆ ಎಂದು ವಿಧಾನ ಪರಿಷತ್‌ನ ಸದಸ್ಯರೂ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್ ಹೇಳಿದರು.
ಅವರು ರಾಜ್ಯ ಬಜೆಟ್ ಬಗೆಗೆ ಪ್ರತಿಕ್ರಿಯೆ ನೀಡಿದರು. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆ ಜನಸಾಮಾನ್ಯರು, ಮಧ್ಯಮ ವರ್ಗದವರ ಆರ್ಥಿಕತೆಗೆ ಚೈತನ್ಯ ನೀಡಿದ್ದು, ಸಿದ್ಧರಾಮಯ್ಯರು ಮಂಡಿಸಿದ ಈ ವರ್ಷದ ಬಜೆಟ್ ರಾಜ್ಯವನ್ನು ಹೊಸ ದಿಕ್ಕಿನತ್ತ ಕೊಂಡೊಯ್ಯಲಿದೆ. ಅದರಲ್ಲೂ ಕರಾವಳಿ ಜಿಲ್ಲೆಯ ಪ್ರಮುಖವಾಗಿರುವ ಮೀನುಗಾರಿಕಾ ಕ್ಷೇತ್ರಕ್ಕೆ ೩ಸಾವಿರ ಕೋಟಿ ರೂ. ಮೊತ್ತದ ಯೋಜನೆ, ಸಮುದ್ರ ಅಂಬುಲೆನ್ಸ್, ಪುತ್ತೂರಿನಲ್ಲಿ ಪಶು ವೈದ್ಯಕೀಯ ಕಾಲೇಜು ನಿಜಕ್ಕೂ ಒಳ್ಳೆಯ ಯೋಜನೆಗಳು. ಈ ಮೂಲಕ ಸಿದ್ಧರಾಮಯ್ಯರು ಆರ್ಥಿಕ ವಲಯದ ಮಾಸ್ಟರ್ ಮೈಂಡ್ ಎನ್ನುವುದನ್ನು ಮತ್ತೆ ಸಾಬೀತು ಮಾಡಿದ್ದಾರೆ.