ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ MLC ಕಿಶೋರ್ ಕುಮಾರ್ ಪುತ್ತೂರು ಭೇಟಿ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಇಂದು ಭೇಟಿ ನೀಡಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯ ರೊಂದಿಗೆ, ಕೇಂದ್ರ ಸರ್ಕಾರದ ಯೋಜನೆಗಳಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA), ಪ್ರಧಾನ ಮಂತ್ರಿ ಆವಾಸ್ ಯೋಜನೆ, 15 ನೇ ಹಣಕಾಸು ಅನುದಾನ, ಸ್ವಚ್ಛ ಭಾರತ ಮಿಷನ್ (SBM), ಜಲಜೀವನ್ ಮಿಷನ್ (JJM) ಮತ್ತು ರಾಜ್ಯ ಸರಕಾರದ ಯೋಜನೆಯಾದ ಬಸವ ವಸತಿ ಮತ್ತು ಡಾ. ಬಿ ಆರ್ ಅಂಬೇಡ್ಕರ್ ನಿವಾಸ್ ಯೋಜನೆಯ ಪ್ರಗತಿಯ ಬಗ್ಗೆ ಚರ್ಚಿಸಿ ಪರಿಶೀಲಿಸಲಾಯಿತು. ಮತ್ತು ವಿನ್ಯಾಸ ಅನುಮೋದನೆ,ನಮೂನೆ 9 & 11ಎ,11-B,ಸ್ವಾಧೀನ ಪ್ರಮಾಣ ಪತ್ರ,ಕಟ್ಟಡ ಮತ್ತು ಭೂ ತೆರಿಗೆ ಸಂಗ್ರಹಣೆ,ವಾರ್ಡ್ ಮತ್ತು ಗ್ರಾಮ ಸಭೆ,ಗ್ರಾಮ ಪಂಚಾಯತ್ ಅಭಿವೃದ್ಧಿಯಲ್ಲಿ ಇರುವ ಅಡಚಣೆ ಮತ್ತು ಕೇಪು ಗ್ರಾಮ ಪಂಚಾಯತ್ ಕೈ ಗೊಂಡಿರುವ ಉತ್ತಮ ಆಡಳಿತದ ಬಗ್ಗೆ ಮಾಹಿತಿ ಪಡೆದು ಕೊಳ್ಳಲಾಯಿತು.
ಕೇಪು ಗ್ರಾಮ ಪಂಚಾಯತಿಯು ಕೇಂದ್ರ ಸರ್ಕಾರದ MGNREGA, ಮತ್ತು ಜಲ ಜೀವನ್ ಮಿಷನ್ (JJM) ಅನುಷ್ಠಾನದಲ್ಲಿ ಸಾಧಿಸಿರುವ ಉತ್ತಮ ಪ್ರಗತಿ ಮತ್ತು ಸಾರ್ವಜನಿಕರ ಸೇವೆಯಲ್ಲಿ ಪಾರದರ್ಶಕತೆ ಮತ್ತು ಗ್ರಾಮ ಪಂಚಾಯತಿಯ ಸಿಬ್ಬಂದಿಯವರ ಉತ್ತಮ ಕಾರ್ಯವೈಖರಿ ಬಗ್ಗೆ ತಿಳಿದು ಪ್ರಶಂಶಿಸಲಾಯಿತು.
ಗ್ರಾಮ ಪಂಚಾಯತಿಯ ಅಧ್ಯಕ್ಷರು,ಉಪಾಧ್ಯಕ್ಷರು,ಸದಸ್ಯರು ತಮ್ಮ ಸೇವಾ ಅವಧಿಯಲ್ಲಿನ ಅನುಭವವನ್ನು ಹಂಚಿಕೊಂಡರು.ಗ್ರಾಮೀಣ ಭಾಗದ ಸಾರ್ವಜನಿಕರು ತಮ್ಮ ನಿವೇಶನದ ವಿನ್ಯಾಸ ಅನುಮೋದನೆಗೆ ನಗರ ಯೋಜನಾ ಪ್ರಾಧಿಕಾರಕ್ಕೆ ಅಲೆದಾಟ ನಡೆಸುತ್ತಿರುವ ಮತ್ತು ಸದರಿ ಪ್ರಾಧಿಕಾರದಲ್ಲಿ ಮಧ್ಯವರ್ತಿಗಳ ಹಾವಳಿಯಿಂದ ಸಾರ್ವಜನಿಕರು ಅನುಭವಿಸುತ್ತಿರುವ ಕಷ್ಟದ ಬಗ್ಗೆ ತಿಳಿಸಿದರು. ಸದರಿ ವಿನ್ಯಾಸ ಅನುಮೋದನೆ ಅಧಿಕಾರವನ್ನು ಗ್ರಾಮ ಪಂಚಾಯತಿಗೆ ನೀಡಲು ಪ್ರಯತ್ನಿಸುವಂತೆ ವಿನಂತಿಸಿಕೊಂಡರು.
ಗ್ರಾಮ ಪಂಚಾಯತಿಯು ಎಲ್ಲಾ ಮನೆಗಳಿಂದ ಒಣಕಸವನ್ನು ಸಂಗ್ರಹಿಸಿ ವಿಲೇವಾರಿ ಮಾಡಲು ಹೆಚ್ಚಿನ ಗಮನ ನೀಡಿ SBM ಯೋಜನೆಯನ್ನು ಯಶಸ್ವಿಗೊಳಿಸಲು ಪ್ರಯತ್ನಿಸುವಂತೆ ತಿಳಿಸಲಾಯಿತು.
ಹಲವಾರು ಬೇಡಿಕೆ ಮತ್ತು ಮನವಿಗಳನ್ನು ಸ್ವೀಕರಿಸಲಾಯಿತು. ತನ್ನ ಕಾರ್ಯ ಚೌಕಟ್ಟಿನಲ್ಲಿ ಸದರಿ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಲಾಯಿತು.
ಗ್ರಾಮ ಪಂಚಾಯಿತಿಯಲ್ಲಿ ಸಿಬ್ಬಂದಿ ಕೊರತೆಯಿದ್ದು ಸದರಿ ಖಾಲಿ ಹುದ್ದೆಯನ್ನು ಭರ್ತಿ ಗೊಳಿಸುವಂತೆ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯವರು ವಿನಂತಿಸಿಕೊಂಡರು ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ಪದ್ಮಶ್ರೀ ಪುರಸ್ಕೃತರಾದ ಶ್ರೀ ಮಹಾಬಲ ನಾಯ್ಕರವರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ,ಕಾರ್ಯದರ್ಶಿ, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಸಾರ್ವಜನಿಕರು ಹಾಜರಿದ್ದರು.


















