HomeFresh Newsಜೆಡಿಎಸ್ ಪಕ್ಷಕ್ಕೆ ಮೊಯ್ದಿನ್ ಬಾವಾ : ಜೆಡಿಎಸ್ ಹಿರಿಯ ನಾಯಕ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಬಾವಾ

ಜೆಡಿಎಸ್ ಪಕ್ಷಕ್ಕೆ ಮೊಯ್ದಿನ್ ಬಾವಾ : ಜೆಡಿಎಸ್ ಹಿರಿಯ ನಾಯಕ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಬಾವಾ

ಮಂಗಳೂರು ಉತ್ತರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ವಂಚಿತ ಮಾಜಿ ಶಾಸಕ ಮೊಯ್ದಿನ್ ಬಾವ ಅವರು ಜೆಡಿಎಸ್ ಪಕ್ಷ ಸೇರಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ನನಗೆ ಅನ್ಯಾಯವಾಗಿದೆ ಎಂದ ಅವರು, ಮಂಗಳೂರು ಉತ್ತರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ.

ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮತ್ತು ಮಾಜಿ ಶಾಸಕ ಮೊಹಿಯುದ್ದಿನ್ ಬಾವ ಅವರ ನಡುವಣ ತೀವ್ರ ಪೈಪೆÇೀಟಿ ಇತ್ತು. ಕೊನೆಗೂ ಹೈಕಮಾಂಡ್ ಹೊಸ ಮುಖಕ್ಕೆ ಮಣೆ ಹಾಕಿದ್ದು, ಇನಾಯತ್ ಅಲಿ ಅವರು ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಹೀಗಾಗಿ ಮಾಜಿ ಶಾಸಕ ಬಾವ ಜೆಡಿಎಸ್ ನತ್ತ ಮುಖ ಮಾಡಿದ್ದಾರೆ. ಮೊಯ್ದಿನ್ ಬಾವಾ ಅವರು ಜೆಡಿಎಸ್‍ನ ಹಿರಿಯ ನಾಯಕ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments