ಚಿತ್ರಕಲೆ: ವಿರಾಟ್ ಕೃಷ್ಣ ರಾಜ್ಯಮಟ್ಟಕ್ಕೆ ಆಯ್ಕೆ
ಮೂಡುಬಿದಿರೆ: ಆಳ್ವಾಸ್ ಆಂಗ್ಲಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿ ವಿರಾಟ್ ಕೃಷ್ಣ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ಸೂಚನೆಯಂತೆ ಕಬ್,ಬುಲ್ ಬುಲ್,ಸ್ಕೌಟ್ಸ್, ಗೈಡ್ಸ್, ರೋವರ್ಸ್,ರೇಂಜರ್ಸ್ ವಿದ್ಯಾರ್ಥಿಗಳಿಗೆ ಆಜಾದಿ ಕಾ ಅಮೃತ್ ಮಹೋತ್ಸವ ಎಂಬ ಶೀರ್ಷಿಕೆಯಲ್ಲಿ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯ ಕಬ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿರಾಟ್ ಕೃಷ್ಣ ಇತ್ತೀಚೆಗೆ ಸ್ಕೌಟ್ ಮತ್ತು ಗೈಡ್ಸ್ ವತಿಯಿಂದ ಮೂಡುಬಿದಿರೆಯಲ್ಲಿ ನಡೆದ ಕಬ್ ವಿಭಾಗದ ತಾಲೂಕು ಮಟ್ಟದ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಆಯ್ಕೆಯಾಗಿದ್ದಾನೆ ಹಾಗೂ ವಲಯ ಮಟ್ಟದ ಪ್ರತಿಭಾ ಕಾರಂಜಿಯ ಪ್ರಾಥಮಿಕ ಶಾಲಾ ಮಟ್ಟದ ಕಥೆ ಹೇಳುವುದು ಮತ್ತು ಧಾರ್ಮಿಕ ಪಠಣ ವಿಭಾಗದಲ್ಲಿ ಪ್ರಥಮ ಸ್ಥಾನಿಯಾಗಿದ್ದಾನೆ.