ವ್ಯಸನ ಕ್ಕೆ ದಾಸರಾಗಿರುವ ವ್ಯಕ್ತಿಗಳಿಗೆ ಮನ ಪರಿವರ್ತನೆ ಮಾಡಬೇಕು : ಡಾ. ದೀಕ್ಷಾ ಶೆಣೈ

ಮೂಡುಬಿದಿರೆ : ಮಾದಕ ದ್ರವ್ಯ ಸೇವನೆ, ಮಾದಕ ವ್ಯಸನ ಈ ಸಮಾಜಕ್ಕೆ ಅಂಟಿಕೊಂಡಿರುವ ಕೆಟ್ಟ ರೋಗ. ಈ ದುಶ್ಚಟಕ್ಕೆ ದೊಡ್ಡ ದೊಡ್ಡ ನಗರಗಳಲ್ಲಿ ಸಣ್ಣ ಸಣ್ಣ ಮಕ್ಕಳಿಂದ ಹಿಡಿದು ಅತೀ ವೃದ್ಧರು ಕೂಡ ಬಲಿಯಾಗುವ ಮೂಲಕ ಇದು ರಾಷ್ಟ್ರೀಯ ಸಮಸ್ಯೆಯಾಗಿ ತಲೆದೂರಿದೆ. ಇಂತಹ ವ್ಯಸನಕ್ಕೆ ದಾಸರಾಗಿರುವ ವ್ಯಕ್ತಿಗಳಿಗೆ ಧೈರ್ಯ ತುಂಬಿ ಮನ ಪರಿವರ್ತನೆ ಮಾಡಬೇಕು ಎಂದು ಆಳ್ವಾಸ್‍ನ ಪ್ರಕೃತಿ – ಯೋಗ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ದೀಕ್ಷಾ ಶೆಣೈ ವಿದ್ಯಾರ್ಥಿಗ ಗೆ ಸಲಹೆ ನೀಡಿದರು.
ಅವರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ) ಧರ್ಮಸ್ಥಳ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಪುತ್ತಿಗೆ ವಲಯ ಹಾಗೂ ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಬಂಗಬೆಟ್ಟು ಇಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತ ನಾಡಿದರು.
ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್‍ನ ಕಾರ್ಯಕ್ರಮ ಸಂಯೋಜಕ ಹರೀಶ್ ಎಂ.ಕೆ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳ ಮನಸು ಹಸಿ ಗೋಡೆಯಂತೆ ಅದಕ್ಕೆ ಏನು ಬಿಸಾಡಿದರೂ ಅದು ತನ್ನಲ್ಲಿ ಹಿಡಿದಿಟ್ಟುಕೊಳ್ಳುತ್ತದೆ. ಆದರಿಂದ ವಿದ್ಯಾರ್ಥಿಗಳು ದುಶ್ಚಟಗಳಗೆ ಬಲಿಯಾಗದಿರಿ ಎಂದರು.
ಕಾಲೇಜಿನ ಪ್ರಾಂಶುಪಾಲ ಚಂದ್ರು, ಎಮ್.ಎನ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರ್ನಾಟಕ ಜನಜಾಗೃತಿ ವೇದಿಕೆಯ ಸದಸ್ಯ ದಿನೇಶ್ ಆನಡ್ಕ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ತಾಲೂಕು ಯೋಜನಾಧಿಕಾರಿ ನಾರಾಯಣ ಶೆಟ್ಟಿ ,ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ವೀಣಾ ಲೊಲಿಟಾ ಪಾಯಸ್, ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ನ್‍ನ ಕಾರ್ಯದರ್ಶಿ ಡಾ| ಅಮರ್ ದೀಪ್, ಶಂಕರ್ ಕೋಟ್ಯಾನ್, ವಿಠಲ್ ಉಪಸ್ಥಿತರಿದ್ದರು.
