ಮೂಡುಬಿದಿರೆ : ಸ್ತನ್ಯಪಾನದ ಮಹತ್ವದ ಬಗ್ಗೆ ಜಾಗೃತಿ

ಮೂಡುಬಿದಿರೆ: ವಿಶ್ವ ಸ್ತನ್ಯಪಾನ ಸಪ್ತಾಹದಂಗವಾಗಿ ದ.ಕ.ಜಿ.ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ಇನ್ನರ್‍ವೀಲ್ ಕ್ಲಬ್ ಮೂಡುಜದಿರೆ ಮತ್ತು ಸಮುದಾಯ ಆರೋಗ್ಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಆರೋಗ್ಯವಂತ ಶಿಶುಗಳ ಪ್ರದರ್ಶನ ಮತ್ತು ಸ್ತನ್ಯಪಾನದ ಮಹತ್ವದ ಬಗ್ಗೆ ಜಾಗೃತಿ ಕಾರ್ಯಕ್ರಮವು ಸಮಾಜ ಮಂದಿರದಲ್ಲಿ ನಡೆಯಿತು.

ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆಡಳತ ವೈದ್ಯಾಧಿಕಾರಿ ಡಾ.ಚಿತ್ರಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಸ್ತನಗಳ ಬಗ್ಗೆ ಮಹಿಳೆಯರಿಗೆ ಜಾಗೃತಿ ಇರಬೇಕು. ಸ್ತನಗಳ ಕ್ಯಾನ್ಸರ್ ಕೇವಲ ಮಹಿಳೆಯರಲ್ಲಿ ಮಾತ್ರ ಕಂಡು ಬರುವುದಲ್ಲ. ಪುರುಷರಲ್ಲಿಯೂ ಇದರ ಲಕ್ಷಣಗಳು ಕಂಡು ಬರುತ್ತದೆ. ವಿದೇಶಗಳಲ್ಲಿ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿ ತಪಾಸಣೆ ಮಾಡಿಸಿಕೊಳ್ಳುತ್ತಾರೆ. ಆದರೆ ನಮ್ಮ ದೇಶದಲ್ಲಿ ಮಹಿಳೆಯರು ವೈದ್ಯರಲ್ಲಿಗೆ ತಪಾಸಣಿಗೆ ಹೋಗುವುದೇ ಕಡಿಮೆ ಎಂದರು.

ಇನ್ನರ್‍ಪೀಲ್ ಕ್ಲಬ್‍ನ ಅಧ್ಯಕ್ಷ ರಮ್ಯಾ ವಿಕಾಸ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲ ಅವರು ಸ್ತನ್ಯಪಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಇನ್ನರ್ ವೀಲ್ ಕ್ಲಬ್‍ನ ಮಾಜಿ ಅಧ್ಯಕ್ಷರುಗಳಾದ ಜಯಶ್ರೀ ಅಮರನಾಥ ಶೆಟ್ಟಿ, ಕಲಾವತಿ, ಶಿವಾ ಶರೀಫ್, ಜ್ಯೋತಿ ಪೈ ಚಂದ್ರಿಕಾ ಮಲ್ಯ, ಯಾಸ್ಮಿನ್, ರತ್ನ ,ಪಾರಡ್ಕ, ಸದಸ್ಯ ಸ್ವರ್ಣಲತಾ, ಡಾ.ಶುದ್ಧಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಮೀನಾಕ್ಷಿ ಮತ್ತಿತರ ಸದಸ್ಯರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.